ರಾಜಕಾರಣಕ್ಕಾಗಿ ಮಠ ಬಳಕೆ ದೇಶದ್ರೋಹ: ಡಿವಿಎಸ್
Team Udayavani, Apr 14, 2024, 11:39 PM IST
ಬೆಂಗಳೂರು: ರಾಜಕಾರಣದ ಸ್ವಾರ್ಥ ಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದರು.
ಇತ್ತೀಚೆಗೆ ಆದಿಚುಂಚನಗಿರಿ ಮಠದ ಕುರಿತು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿ, ಒಕ್ಕಲಿಗರ ಮಠವೇ ಆಗಿರಲಿ, ಯಾವುದೇ ಮಠವಾಗಿರಲಿ ರಾಜಕೀಯವಾಗಿ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಧಾರ್ಮಿಕ ಸಂಸ್ಥೆಗಳು ಸಾಮಾಜಿಕ ಕಾರ್ಯಗಳನ್ನೂ ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.