ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಖಚಿತ: ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಹೇಳಿಕೆ
Team Udayavani, Sep 22, 2021, 7:00 AM IST
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆಯಾಗುತ್ತಿದೆ. ಈ ವರ್ಷ 220 ಬಾರಿ ಇವು ಬಳಕೆಯಾಗಿರುವುದು ಪತ್ತೆಯಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆ ಕಠಿನ ನಿಗಾ ಇರಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನಸಭೆ ಕಲಾಪದ ಸಂದರ್ಭ ಶೂನ್ಯವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ವಿಷಯ ಪ್ರಸ್ತಾವಿಸಿದಾಗ ಗೃಹ ಸಚಿವರು ಉತ್ತರಿಸಿದರು. 2020ರಲ್ಲಿ 256 ಮತ್ತು 2021ರಲ್ಲಿ 220 ಸ್ಯಾಟಲೈಟ್ ಫೋನ್ ಬಳಕೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ಜತೆಗೆ ರಾಜ್ಯದ ಆಂತರಿಕ ಭದ್ರತೆ ವಿಭಾಗಗಳು ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿವೆ ಎಂದರು.
ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಸುದ್ದಿ ಆಗಾಗ ಹರಿದಾಡುತ್ತಿದೆ. ಈ ಬಗ್ಗೆ ಮಾಧ್ಯಮ ಗಳು ವರದಿ ಮಾಡುತ್ತಿವೆ ಮತ್ತು ಕೆಲವೊಮ್ಮೆ ಅಮಾಯಕರ ಹೆಸರು ದುರ್ಬಳಕೆಯಾಗುತ್ತಿದೆ. ಈ ವಿಚಾರವಾಗಿ ದಕ್ಷಿಣ ಕನ್ನಡ ಭಾಗದಲ್ಲಿ ಗೊಂದಲಗಳಿವೆ. ಕರಾವಳಿ ಶಾಂತಿಯಿಂದ ಇರಲು ಸರಕಾರ ಈ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಖಾದರ್ ಒತ್ತಾಯಿಸಿದರು.
2011ರಲ್ಲಿ ಮುಂಬಯಿಯಲ್ಲಿ ನಡೆದ ಉಗ್ರ ದಾಳಿಯ ಬಳಿಕ ಭಾರತದಲ್ಲಿ ಮತ್ತು ಭಾರತೀಯ ಸ್ವಾಮ್ಯದ ಸಾಗರ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ನಿಷೇಧಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮತ್ತು ದೇಶದ ಭದ್ರತೆಗೆ ಸಂಬಂಧಪಟ್ಟ ವಿಷಯ ವಾದ್ದರಿಂದ ತೀವ್ರ ನಿಗಾ ಇರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಇದರಿಂದ ಗಾಬರಿಪಡುವಂಥದ್ದೇನಿಲ್ಲ. ಹಲವು ವಿಷಯಗಳನ್ನು ನೇರವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.