ಮೂರು ತಿಂಗಳೊಳಗೆ ಶೇ.80 ಜನರಿಗೆ ಲಸಿಕೆ ಹಾಕಿಸಿ, 3ನೇ ಅಲೆಯಿಂದ ರಕ್ಷಿಸಿ: ಡಿ.ಕೆ.ಶಿವಕುಮಾರ್
Team Udayavani, Jul 4, 2021, 12:52 PM IST
ಬೆಂಗಳೂರು: ಕೋವಿಡ್ ಮೂರನೇ ಅಲೆಯಿಂದ ಜನರನ್ನು ರಕ್ಷಿಸಲು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ. 80 ಜನರಿಗೆ ಲಸಿಕೆ ಹಾಕಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಫತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ತಿಂಗಳೊಳಗೆ ರಾಜ್ಯದ ಶೇಕಡ 80 ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಕೋವಿಡ್ ಮೂರನೇ ಅಲೆಯಿಂದ ರಾಜ್ಯದ ರಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.
‘ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ತೀವ್ರವಾಗುವ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಶೇ.80 ವಯಸ್ಕರಿಗೆ ಸೆಪ್ಟೆಂಬರ್ 30 ರೊಳಗೆ ಎರಡು ಡೋಸ್ ಲಸಿಕೆ ನೀಡಿದರೆ ಮೂರನೇ ಅಲೆಯಿಂದ ರಕ್ಷಣೆ ಪಡೆಯಬಹುದು ಮತ್ತು ಅದರ ತೀವ್ರತೆ ತಡೆಯಬಹುದು. ಅದಕ್ಕಾಗಿಯೇ ಈ ಸವಾಲಿಗೆ ಸರ್ಕಾರ ಸಿದ್ದವಿದೆಯೇ? ಎಂದು ಪ್ರಶ್ನೆ ಮಾಡುತ್ತಿದ್ದೇನೆ” ಎಂದರು.
”ವ್ಯಾಕ್ಸಿನೇಷನ್ ಬಗ್ಗೆ ಕೇವಲ ಮಾತನಾಡಿದರೆ ಸಾಲದು. ರಾಜ್ಯ ಸರ್ಕಾರ ಈವರೆಗೆ ಶೇಕಡ 80 ಜನರಿಗೆ ಮಾತ್ರವೇ ಲಸಿಕೆ ನೀಡಿದೆ. ಕೇವಲ ಒಂದು ಡೋಸ್ ಲಸಿಕೆ ಹಾಕಿದರೆ ಕೋವಿಡ್ ತೀವ್ರತೆಯನ್ನು ತಗ್ಗಿಸಲಾಗದು. ಕೊರೊನಾದಿಂದ ಪೂರ್ಣ ರಕ್ಷಣೆ ಸಾಧ್ಯವಾಗಲು ಎರಡೂ ಡೋಸ್ ಪಡೆದಿರಬೇಕು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಸೆಪ್ಟೆಂಬರ್ ಅಂತ್ಯದೊಳಗೆ ಶೇ.80 ವಯಸ್ಕರಿಗೆ ಎರಡೂ ಡೋಸ್ ಹಾಕುವ ಹೊಣೆಗಾರಿಕೆಯನ್ನು ಸರ್ಕಾರ ನಿರ್ವಹಿಸಲೇಬೇಕು. ಈ ಸವಾಲಿನಲ್ಲಿ ವಿಫಲವಾದರೆ, 3ನೇ ಅಲೆಯ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ” ಎಂದು ಡಿಕೆಶಿ ಎಚ್ಚರಿಸಿದರು.
ಇದನ್ನೂ ಓದಿ:ನಾವು ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ: ಎಚ್. ವಿಶ್ವನಾಥ್
ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್ ಮಾಡಲು ಒತ್ತು ಕೊಡಬೇಕು. ಬಿಜೆಪಿ ನಾಯಕರು ಲಸಿಕೆ ನೀಡಿಕೆಯಲ್ಲೂ ಅಪರ- ತಪರಾ ಮಾಡುವುದನ್ನು ನಿಲ್ಲಿಸಿ, ಎಲ್ಲರಿಗೂ ಲಸಿಕೆ ಹಾಕಿಸಿ ಜನರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು” ಎಂದು ತಾಕೀತು ಮಾಡಿದರು.
”ಕೇಂದ್ರದಲ್ಲಿ ಅವರದೇ ಪಕ್ಷದ ಸರ್ಕಾರ ಇದ್ದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅವಶ್ಯಕ ಪ್ರಮಾಣದ ಲಸಿಕೆ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವ್ಯಾಕ್ಸಿನೇಷನ್ ಬಗ್ಗೆ ಒಂದು ದಿನದ ಅಬ್ಬರದ ಪ್ರಚಾರ ಪಡೆದು ಸರ್ಕಾರ ಸುಮ್ಮನಾದರೆ ಹೇಗೆ? ಲಸಿಕೆ ಹಾಕುವ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ಹಾಕುವಲ್ಲಿ ಉತ್ತರ ಕರ್ನಾಟಕದ ಜನರನ್ನು ಮಲತಾಯಿ ಮಕ್ಕಳಂತೆ ನೋಡಲಾಗುತ್ತಿದೆ. ಬೆಂಗಳೂರು ನಗರದಲ್ಲೂ ಲಸಿಕೆ ದಾಸ್ತಾನು ಕೊರತೆಯಿದೆ. ಜನ ಲಸಿಕೆಗಾಗಿ ಕ್ಯೂ ನಿಲ್ಲುವುದು ತಪ್ಪಿಲ್ಲ. ಅವಶ್ಯಕ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆಗಿಲ್ಲವಾದ ಕಾರಣ ದಿಲ್ಲಿಗೆ ಹೋಗುವುದಾಗಿ ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಈ ಸರ್ಕಾರ ಈಗಲಾದರೂ ಎಚ್ಚೆತ್ತು ಬದ್ದತೆಯಿಂದ ಕೆಲಸ ಮಾಡುತ್ತಾ ನೋಡೋಣ” ಎಂದು ಶಿವಕುಮಾರ್ ಹೇಳಿದರು.
”ಡೆಲ್ಟಾ ರೂಪಾಂತರಿ ವೈರಾಣು ವಿರುದ್ದ ರಕ್ಷಣೆಗಾಗಿ ಕೋವಿಶೀಲ್ಡ್ 2 ನೇ ಲಸಿಕೆಯನ್ನು 8 ವಾರಗಳೊಳಗೆ ಕೊಡಬೇಕು. ಅದಕ್ಕಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಲಿ” ಎಂದು ಸಲಹೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.