ಸದ್ಯದಲ್ಲೇ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ: ಸಚಿವ ಸುಧಾಕರ್
Team Udayavani, Apr 29, 2022, 9:54 AM IST
ಬೆಂಗಳೂರು: ಆರರಿಂದ ಹನ್ನೆರಡು ವರ್ಷದ ಮಕ್ಕಳಿಗೆ ಸದ್ಯದಲ್ಲೇ ಲಸಿಕೆ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಸದ್ಯಕ್ಕೆ ಯಾರು ಆತಂಕ ಪಡುವ ಅವಶ್ಯಕತೆಯಿಲ್ಲ. ದೊಡ್ಡ ಮಟ್ಟದ ಕೇಸ್ ಹೆಚ್ಚಳವಾಗಿಲ್ಲ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಮತ್ತು ಮಾಸ್ಕ್ ಕಡ್ಡಾಯವಾಗಿ ಹಾಕಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.
ಅನಗತ್ಯವಾಗಿ ಭಯ, ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಬೂಸ್ಟರ್ ಡೋಸ್ ನ್ನು ಈಗ ಜನರು ತೆಗೆದುಕೊಳ್ಳುತ್ತಿದ್ದಾರೆ. 2-3 ದಿನಗಳಿಂದ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದರು.
ಒಮಿಕ್ರಾನ್ ಹೊಸ ತಳಿ ಪತ್ತೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಲ್ಯಾಬ್ ಗೆ ಸ್ಯಾಂಪಲ್ ಕಳಿಸಲಾಗಿದೆ. ಇಂದು ವರದಿ ಬರಬಹುದು ಎಂದು ತಿಳಿಸಿದರು.
ಇದನ್ನೂ ಓದಿ:ಬಿಜೆಪಿಯವರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ: ಸಿದ್ದರಾಮಯ್ಯ
6-12 ನೇ ವರ್ಷದ ಮಕ್ಕಳ ಶೀಘ್ರವೇ ಲಸಿಕೆ ಅಭಿಯಾನ ಪ್ರಾರಂಭ ಮಾಡುತ್ತೇವೆ. ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಅಭಿಯಾನ ಆರಂಭ ಮಾಡುತ್ತೇವೆ. ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಸೋಮವಾರದಿಂದಲೇ ಲಸಿಕೆ ಕೊಡಲು ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಇಂದು ಕೂಡಾ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಬೇಸಿಗೆ ರಜೆ ಪ್ರಾರಂಭವಾಗಿದೆ. ಹೀಗಾಗಿ ಶಾಲೆಯಲ್ಲಿ ಮಾಡಬೇಕೆ ಅಥವಾ ಆಯಾ ಇನ್ಸ್ಟಿಟ್ಯೂಷನ್ ನಲ್ಲಿ ಮಾಡಬೇಕೆ ಎಂದು ಚರ್ಚೆ ಮಾಡುತ್ತೇವೆ ಎಂದು ಸುಧಾಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.