31.75 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ: ಇಲಾಖೆ ಸಜ್ಜು
ಶಾಲೆಯಿಂದ ಹೊರಗುಳಿದವರಿಗೂ ಲಸಿಕೆ ತಲುಪಿಸುವ ಗುರಿ
Team Udayavani, Jan 1, 2022, 7:25 AM IST
ಬೆಂಗಳೂರು: ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯದಲ್ಲಿ 15ರಿಂದ 18ವರ್ಷದೊಳಗಿನ 31.75 ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆಗೆ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಕೋವ್ಯಾಕ್ಸಿನ್ ಲಸಿಕೆ ನೋಂದಣಿಗೆ ವಿದ್ಯಾರ್ಥಿಗಳಿಗೆ ಪೋಷಕರ ಮೊಬೈಲ್ ನಂಬರ್ ಬಳಿಸಿಕೊಂಡು ಅವರ ಅಕೌಂಟ್ ಮೂಲಕ ವಿದ್ಯಾರ್ಥಿಗಳ ನೊಂದಣಿ ಮಾಡಲಾಗುತ್ತಿದೆ. ಈ ವ್ಯವಸ್ಥೆ ಸಾಧ್ಯವಾಗದ ಕಡೆಯಲ್ಲಿ ಶಾಲೆ ಮುಖ್ಯೋಪಾಧ್ಯಾಯರ ದೂರವಾಣಿಯ ಮೂಲಕ ನೋಂದಣಿ ಮಾಡಿಕೊಳ್ಳಲಾಗಿದೆ. ಶಾಲೆಯ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಬಳಸಿಕೊಂಡು ಫೋಟೋ ಐಡಿಯನ್ನು ಕೋವಿನ್ ಪೋರ್ಟಲ್ ಮೂಲಕ ದಾಖಲಿಸಲಾಗಿದೆ.
ಆರೋಗ್ಯ ಇಲಾಖೆಯ ವಿಶೇಷ ತರಬೇತಿ ಪಡೆದುಕೊಂಡ ಸಿಬಂದಿ ತಂಡ ಭಾಗವಹಿಸಲಿದ್ದಾರೆ. ಅವರು ಮಕ್ಕಳ ಲಸಿಕೆಯಲ್ಲಿ ವೈದ್ಯಕೀಯ ಅರ್ಹತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಮಕ್ಕಳಲ್ಲಿ ಯಾರಾದರೂ ಟಿಡಿ ಹಾಗೂ ಇತರ ಯಾವುದಾದರೂ ಲಸಿಕೆಯನ್ನು ಪಡೆದಿದ್ದರೆ ಅಂತಹ ಮಕ್ಕಳಿಗೆ 15 ದಿನಗಳ ಅನಂತರ ಕೋವ್ಯಾಕ್ಸಿನ್ ಲಸಿಕೆ ವಿತರಿಸಲಾಗುತ್ತದೆ. ಜತೆಗೆ ಲಸಿಕೀಕರಣದ ಸಮಯ ಯಾವುದೇ ಅಡ್ಡಪರಿಣಾಮಗಳ ನಿರ್ವಹಣೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಾರ್ಮಿಕ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ಇಲಾಖೆಗಳು ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ ಮಕ್ಕಳ ಲಸಿಕೀಕರಣಕ್ಕೆ ವಿಶೇಷ ಸಹಕಾರ ನೀಡಲಿದೆ. ಈ ಮಕ್ಕಳನ್ನು ಗುರುತಿಸಿ ಸಮೀಪದ ಆರೋಗ್ಯ ಇಲಾಖೆ ಹತ್ತಿರದ ಸರಕಾರಿ ಲಸಿಕೀಕರಣ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.
ಇದನ್ನೂ ಓದಿ:ಬೂಸ್ಟರ್ ಡೋಸ್ ಪಡೆಯಲು ವಾಕ್-ಇನ್ ಮೂಲಕ ನೋಂದಣಿ
ವಾಹನ, ತಿಂಡಿ ವ್ಯವಸ್ಥೆ
ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆ, ದಾನಿ, ಶಾಲೆಗಳ ಸಹಯೋಗದಲ್ಲಿ ಮಕ್ಕಳಿಗೆ ಉಪಹಾರ, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಲಸಿಕೀಕರಣಕ್ಕೆ ಅಗತ್ಯವಿರುವ ವಾಹನ ವ್ಯವಸ್ಥೆಯನ್ನು ಶಾಲೆಗಳಲ್ಲಿ ಮಾಡಿಕೊಳ್ಳಲಾಗಿದೆ.
ರಾಜ್ಯದಲ್ಲಿ 15-18 ವರ್ಷದೊಳಗಿನ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ಪಟ್ಟಿಯಲ್ಲಿ ಬಿಬಿಎಂಪಿ ಮೊದಲ ಸ್ಥಾನದಲ್ಲಿದ್ದು 4.42 ಲಕ್ಷ ವಿದ್ಯಾರ್ಥಿಗಳನ್ನು ಹೊಂದಿದೆ. ಬೆಳಗಾವಿ 2.47 ಲಕ್ಷ, ಬಳ್ಳಾರಿ 1.64 ಲಕ್ಷ, ಕಲಬುರಗಿ 1.59 ಲಕ್ಷ, ಮೈಸೂರು 1.47 ಲಕ್ಷ, ವಿಜಯಪುರ 1.23 ಲಕ್ಷ, ತುಮಕೂರು 1.22 ಲಕ್ಷ, ರಾಯಚೂರು 1.14, ಬೀದರ್ 1.5 ಲಕ್ಷ, ದ.ಕ. 1.1 ಲಕ್ಷ, ಬಾಗಲಕೋಟೆಯಲ್ಲಿ 1 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಎರಡೂ ಇಲಾಖೆ ಸಜ್ಜಾಗಿದೆ. ದಾವಣಗೆರೆ, ಉಡುಪಿ, ಉತ್ತರ ಕನ್ನಡ, ಯಾದಗಿರಿ ಸೇರಿದಂತೆ ಉಳಿದ ಜಿಲ್ಲೆಯಲ್ಲಿ 40,000ದಿಂದ 88,000 ಫಲಾನುಭವಿಗಳಿದ್ದಾರೆ.
2007ರಲ್ಲಿ ಜನಿಸಿದ 15 ವರ್ಷ ಮೇಲ್ಪಟ್ಟ ಮಕ್ಕಳು ಕೋವ್ಯಾಕ್ಸಿನ್ ಲಸಿಕೆ ಪಡೆಯುವ ಅರ್ಹತೆಯನ್ನು ಪಡೆದುಕೊಂಡಿದ್ದು ಈಗಾಗಲೇ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಲಸಿಕಾಕರಣಕ್ಕೆ ಮುನ್ನ ಮಕ್ಕಳ ಪೋಷಕರೊಂದಿಗೆ ವಿಶೇಷ ಜಾಗೃತಿ ಸಭೆಯನ್ನು ಏರ್ಪಡಿಸಿ, ಲಸಿಕೀಕರಣದ ಮಹತ್ವ ಹಾಗೂ ಆವಶ್ಯಕತೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.