ಲಸಿಕೆ ನೀಡಿಕೆ: ರಾಜ್ಯವೇ ಮೊದಲಿಗ
Team Udayavani, Jan 26, 2021, 7:00 AM IST
ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 2,30,119 ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ಹಾಕಲಾಗಿದ್ದು, ದೇಶದಲ್ಲಿ ಇಂಥ ಸಾಧನೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜ.16ರಂದು, ಅಭಿಯಾನ ಶುರುವಾಗಿದ್ದು, ಜ.20ರಂದು ಒಂದು ಲಕ್ಷದ ಸಿಬಂದಿಗೆ ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿತ್ತು. ಅಲ್ಲದೆ, ಅಭಿಯಾನ ಆರಂಭವಾದಾಗಿನಿಂದಲೂ ಕರ್ನಾಟಕವು ಲಸಿಕೆ ವಿತರಣೆಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಅನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ, ಒರಿಸ್ಸಾ ಮತ್ತು ಉತ್ತರ ಪ್ರದೇಶಗಳಿವೆ.
ಅಭಿಯಾನದ 10ನೇ ದಿನವಾದ ಸೋಮವಾರ 1,099 ಕೇಂದ್ರಗಳಿಂದ 85,422 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ 1,097 ಕೇಂದ್ರಗಳಿಂದ 32,277 ಮಂದಿಗೆ ಲಸಿಕೆ ಹಾಕುವ ಮೂಲಕ ಶೇ. 38ರಷ್ಟು ಗುರಿ ತಲುಪಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 6,092 ಸಿಬಂದಿಗೆ ಲಸಿಕೆ ನೀಡಲಾಗಿದೆ.
ಕೆಲವು ಜಿಲ್ಲೆಗಳಲ್ಲಿ ನಾನಾ ಕಾರಣಗಳಿಂದ ನೋಂದಾಯಿತ ಫಲಾನುಭವಿಗಳು ಗೈರಾಗಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಿಗೂ ತೀವ್ರ ಮತ್ತು ಗಂಭೀರ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಅಂಕಿ -ಅಂಶ ;
5,279 : ಯೋಜಿತ ಲಸಿಕೆ ವಿತರಣೆ ಕೇಂದ್ರಗಳು
5,215 : ಕಾರ್ಯಗತ
4,20,274 : ಗುರುತಿಸಿದ ಫಲಾನುಭವಿಗಳು
2,30,119 : ಲಸಿಕೆ ಪಡೆದವರು
55 ಶೇ. ಗುರಿ ಸಾಧನೆ
500 ಸೆಲಿಬ್ರಿಟಿಗಳಿಗೆ ಲಸಿಕೆ ನೀಡಲು ಪ್ರಧಾನಿಗೆ ಮನವಿ :
ಕೋವಿಡ್ ಲಸಿಕೆ ಕುರಿತು ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಮುಖ್ಯಮಂತ್ರಿಗಳು, ಸಚಿವರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಸುಮಾರು 500 ರಷ್ಟು ಜನಪ್ರಿಯ ವ್ಯಕ್ತಿಗಳಿಗೆ (ಸೆಲಿಬ್ರಿಟಿ) ಲಸಿಕೆ ನೀಡುವಂತೆ ಕ್ರಮ ವಹಿಸಲು ಪ್ರಧಾನಿಗಳಿಗೆ ಕೋರಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ತಿಳಿಸಿದ್ದಾರೆ.
ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ಪರಿಣಾಮ ಆಗಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಹೆಚ್ಚು ಆರೋಗ್ಯ ಕಾರ್ಯಕರ್ತರು ಪಡೆಯಬೇಕು. ಈಗಾಗಲೇ ಮೊದಲ ಹಂತಕ್ಕೆ ಬೇಕಾದಷ್ಟು ಪ್ರಮಾಣದ ಲಸಿಕೆ ದಾಸ್ತಾನು ರಾಜ್ಯದಲ್ಲಿದೆ.– ಡಾ| ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.