ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರರಿಗೂ ವ್ಯಾಕ್ಸಿನ್ ಸೌಲಭ್ಯ: ಶಶಿಕಲಾ ಜೊಲ್ಲೆ ಭರವಸೆ
Team Udayavani, May 17, 2021, 4:50 PM IST
ಬೆಂಗಳೂರು: ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೋವಿಡ್ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:ಎಲ್ಲದಕ್ಕೂ ಕಾಂಗ್ರೆಸ್ ದೂರುವ ಬಿಜೆಪಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ಈಶ್ವರ ಖಂಡ್ರೆ
ಪ್ರಮುಖವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಇವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.