Valmiki Corporation Scam ಕೇಸ್ ಸಿಬಿಐಗೆ ಒಪ್ಪಿಸಿ: ಹೈಕೋರ್ಟ್‌ಗೆ ಬ್ಯಾಂಕ್ ಮನವಿ
ಯೂನಿಯನ್ ಬ್ಯಾಂಕ್ ದುರ್ಬಳಕೆ, ಎಸ್‌ಐಟಿಗೆ ತನಿಖೆ ಅಧಿಕಾರವಿಲ್ಲ ; ವಿಚಾರಣೆ ಸೆಪ್ಟಂಬರ್ 4ಕ್ಕೆ ಮುಂದೂಡಿಕೆ
Team Udayavani, Aug 8, 2024, 7:20 AM IST
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಅನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ. 4ಕ್ಕೆ ನಿಗದಿಪಡಿಸಿದೆ. ಬ್ಯಾಂಕ್ ಸಲ್ಲಿಸಿದ ಅರ್ಜಿಯು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಬ್ಯಾಂಕ್ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ವೆಂಕಟ ರಮಣಿ ವಾದ ಮಂಡಿಸಿ, 50 ಕೋಟಿ ರೂ.ಗಿಂತಲೂ ಹೆಚ್ಚು ಅವ್ಯವಹಾರ ನಡೆದಿದ್ದರೆ ಅಂತಹ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬಹುದು.
ಸಿಬಿಐಗೆ ಮಾತ್ರ ಬ್ಯಾಂಕುಗಳ ಹಗರಣಗಳ ತನಿಖೆ ನಡೆಸಲು ಅವಕಾಶವಿದೆ. ಅಲ್ಲದೇ ಹಗರಣದಲ್ಲಿ ಭಾಗಿಯಾಗಿರುವ ಬ್ಯಾಂಕ್ ಅಧಿಕಾರಿಗಳಲ್ಲದೇ ಇತರರನ್ನು ವಿಚಾರಣೆಗೊಳಪಡಿಸಬೇಕಾಗಿದೆ. ಆದರೆ ರಾಜ್ಯ ಸರಕಾರ ಈ ಹಗರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದೆ. ಈ ನಿಟ್ಟಿನಲ್ಲಿ ಸಿಬಿಐ ಅಧಿಕಾರವಿರುವ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದು ವಾದಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ರಾಜ್ಯದಲ್ಲಿ ನಡೆದಿರುವ ಹಗರಣಗಳ ಕುರಿತು ರಾಜ್ಯ ಪೊಲೀಸ್ ವಿಚಾರಣೆ ಗೊಳಪಡಿಸಬಹುದಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕು. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ವಾಲ್ಮೀಕಿ ನಿಗಮದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರೊ| ರವಿವರ್ಮ ಕುಮಾರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ದೂರು ದಾಖಲಿಸಿರುವುದು ನಿಗಮದಿಂದ. ಆದರೆ ನಿಗಮಕ್ಕೆ ಈವರೆಗೂ ಅರ್ಜಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸಿಲ್ಲ. ಆದ ಕಾರಣ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಎಸ್‌ಐಟಿ ವಿಚಾರಣ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಾಥಮಿಕ ಆರೋಪ ಪಟ್ಟಿಯಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ದಾಖಲಿಸಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸಿ ವಿಚಾರಣೆ ಮುಂದೂಡಿತು.
ಯೂನಿಯನ್
ಬ್ಯಾಂಕ್ ವಾದವೇನು?
-50 ಕೋಟಿ ರೂ.ಗಿಂತ ಹೆಚ್ಚು ಅವ್ಯವಹಾರದ ಕೇ ಸ ನ್ನು ಸಿಬಿಐ ತನಿಖೆಗೆ ವಹಿಸಬಹುದು
-ಸಿಬಿಐಗೆ ಮಾತ್ರ ಬ್ಯಾಂಕ್‌ಗಳ ಹಗರಣಗಳ ತನಿಖೆ ನಡೆಸಲು ಅವಕಾಶವಿದೆ: ವಕೀ ಲರ ವಾದ
-ಪ್ರಕರಣದಲ್ಲಿ ಬ್ಯಾಂಕ್ ಮಾತ್ರ ವಲ್ಲ, ಇತರ ಆರೋಪಿಗಳ ವಿಚಾರಣೆಯೂ ಆಗಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.