Valmiki Corporation Scam ಆರೋಪ ಪಟ್ಟಿ: ನಾಗೇಂದ್ರ, ದದ್ದಲ್ ಹೆಸರೇ ಇಲ್ಲ !
12 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಕೆ
Team Udayavani, Aug 6, 2024, 7:05 AM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷತನಿಖಾ ತಂಡ (ಎಸ್‌ಐಟಿ)ವು ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ, ಶಾಸಕ ಬಸವನ ಗೌಡ ದದ್ದಲ್ ಹೊರತು ಪಡಿಸಿ ಇತರ 12 ಮಂದಿ ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ಕೋರ್ಟ್‌ಗೆ 7 ಸಂಪುಟ, 3,072 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ. ಅಲ್ಲದೆ ಈ ಪ್ರಕರಣದಲ್ಲಿ 67 ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಜೆ.ಜಿ. ಪದ್ಮನಾಭ್, ಲೆಕ್ಕ ಅಧೀಕ್ಷಕರಾಗಿದ್ದ ಪರಶುರಾಮ ದುರ್ಗಣ್ಣನವರ್, ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ, ನೆಕ್ಕುಂಟೆ ನಾಗರಾಜ್, ನಾಗೇಶ್ವರ್ ರಾವ್, ಹೈದರಾಬಾದ್‌ನ ಎಂ. ಚಂದ್ರಶೇಖರ್, ಗಾದಿರಾಜು ಸತ್ಯನಾರಾಯಣ ವರ್ಮಾ, ಉಡುಪಿಯ ಜಿ.ಕೆ. ಜಗದೀಶ್, ತೇಜ ತಮ್ಮಯ್ಯ, ಆಂಧ್ರಪ್ರದೇಶದ ಗಚ್ಚಿಬೌಲಿ ಪಿಟ್ಟಿಲ ಶ್ರೀನಿವಾಸ, ಹೈದರಾಬಾದ್‌ನ ಸಾಯಿತೇಜ ಹಾಗೂ ಕಾಕಿ ಶ್ರೀನಿವಾಸ್ ರಾವ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಧಿತರಿಂದ 16.83 ಕೋಟಿ ರೂ. ನಗದು ಜಪ್ತಿ ಮಾಡಿದ್ದು, 11.70 ಕೋಟಿ ರೂ. ಮೌಲ್ಯದ 16 ಕೆ.ಜಿ. ಚಿನ್ನಾಭರಣ, 4.15 ಕೋಟಿ ರೂ. ಮೌಲ್ಯದ ಲ್ಯಾಂಬೋರ್ಗಿನಿ ಮತ್ತು ಮರ್ಸಿಡಿಸ್ ಬೆಂಜ್ ಕಾರುಗಳು, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 3.19 ಕೋಟಿ ರೂ. ಮತ್ತು ಸ್ಥಗಿತಗೊಳಿಸಲಾಗಿರುವ ಖಾತೆಗಳಲ್ಲಿರುವ 13.72 ಕೋಟಿ ರೂ. ಹಣ ಜಪ್ತಿ ಸೇರಿ ಒಟ್ಟು 49.96 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.
ನಾಗೇಂದ್ರ, ದದ್ದಲ್ ಹೆಸರಿಲ್ಲ
ಪ್ರಾಥಮಿಕ ಆರೋಪ ಪಟ್ಟಿಯಲ್ಲಿ ಹಗರಣದ ರೂವಾರಿಗಳು ಎನ್ನಲಾದ, ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖೀಸಿಲ್ಲ. ಏಕೆಂದರೆ ಈಗಾಗಲೇ ಈ ಇಬ್ಬರು 2 ಬಾರಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿ, ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ ನಿಗಮದ ಅಧಿಕಾರಿಗಳು ತಮ್ಮ ಗಮನಕ್ಕೆ ಬಾರದಂತೆ ಅಕ್ರಮ ಎಸಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಹೀಗಾಗಿ ಈ ಇಬ್ಬರನ್ನು ಆರೋಪಿಗಳನ್ನಾಗಿ ಪರಿಗಣಿಸಬೇಕೋ ಅಥವಾ ಸಾಕ್ಷಿಗಳಾಗಿ ಪರಿಗಣಿಸಬೇಕೋ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಅಂತಿಮ ಆರೋಪಪಟ್ಟಿಯಲ್ಲಿ ಈ ಇಬ್ಬರು ಹೆಸರು ಉಲ್ಲೇಖೀ
ಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರಾಗೃಹ ಅಧಿಕಾರಿಗಳಿಗೆ ನೋಟಿಸ್
ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸತ್ಯನಾರಾಯಣ ವರ್ಮಾನನ್ನು ಇ.ಡಿ. ಅಧಿಕಾರಿಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಬಾಡಿ ವಾರಂಟ್ ಪಡೆದುಕೊಂಡಿದ್ದರು. ಆದರೆ ಜೈಲಿನ ಅಧಿಕಾರಿಗಳು ಆರೋಪಿಯನ್ನು ಎಸ್‌ಐಟಿ ವಶಕ್ಕೆ ನೀಡಿದ್ದರು. ಈ ಸಂಬಂಧ ಉತ್ತರ ನೀಡುವಂತೆ ಜೈಲಿನ ಮುಖ್ಯಸ್ಥರು ಹಾಗೂ ಕಾರಾಗೃಹ ಇಲಾಖೆ ಮುಖ್ಯಸ್ಥರಿಗೆ ಕೋರ್ಟ್ ನೋಟಿಸ್ ಹೊರಡಿಸಿದೆ ಎಂದು ತಿಳಿದು ಬಂದಿದೆ.
ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ
ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ.ಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಶೇಷ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ಮುಂದುವರಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.