Valmiki ನಿಗಮ ಹಗರಣಕೋರರಿಂದ ಸರಕಾರ,ಅಧಿಕಾರಿಗಳ ಹನಿ ಟ್ರ್ಯಾಪ್: ಶ್ರೀರಾಮುಲು ಕಿಡಿ
ಲೋಕಸಭೆ ಚುನಾವಣೆ ಸೇರಿ ವಿವಿಧ ಚುನಾವಣೆಗಳಲ್ಲಿ ಹಣ ಬಳಸಿಕೊಳ್ಳಲಾಗಿದೆ...
Team Udayavani, Jul 11, 2024, 6:36 PM IST
ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗಣಕೋರರು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸರಕರ ಮತ್ತು ಬ್ಯಾಂಕ್ ಅಧಿಕಾರಿಗಳನ್ನು ಹನಿ-ಟ್ರ್ಯಾಪ್ ಮಾಡಿ ಹಣ ದುರುಪಯೋಗಪಡಿಸಿಕೊಂಡಿದೆ’ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಬಿ. ಶ್ರೀರಾಮುಲು ಗುರುವಾರ ಆರೋಪಿಸಿದ್ದಾರೆ.
ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಜಿ ಸಚಿವ ಬಿ. ಶ್ರೀರಾಮುಲು, ರಾಜು ಗೌಡ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನುಮಂತು, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು,ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್, ಶಾಂತರಾಮ್ ಸಿದ್ದಿ ಉಪಸ್ಥಿತರಿದ್ದರು.
‘ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಮೀಸಲಾದ ಹಣದಿಂದ ಐಷಾರಾಮಿ ಕಾರುಗಳನ್ನು ಖರೀದಿಸಲಾಗಿದೆ . ಲೋಕಸಭೆ ಚುನಾವಣೆ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಈ ಹಣವನ್ನು ಲಾಂಡರಿಂಗ್ ಮಾಡಿ ಬಳಸಲಾಗಿದೆ’ ಎಂದು ಶ್ರೀರಾಮುಲು ಆರೋಪಿಸಿದರು.
ವಂಚಕರು ವಾಲ್ಮೀಕಿ ನಿಗಮದ ಹಣದಲ್ಲಿ ಲಂಬೋರ್ಗಿನಿ ಕಾರನ್ನು ಖರೀದಿಸಿ, ಹವಾಲಾ ಮೂಲಕ ಹಣ ಹರಿಸಿ ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂದು ಶ್ರೀರಾಮುಲು ಹೇಳಿದರು.
ರಾಜು ಗೌಡ ಆಕ್ರೋಶ
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಇಡೀ ಕಾಂಗ್ರೆಸ್ ಸರ್ಕಾರವೇ ಭಾಗಿಯಾಗಿದೆ. ನಿಗಮದ 187 ಕೋಟಿ ರೂ.ವರ್ಗಾವಣೆಯಾಗಿದ್ದರೂ ಇದುವರೆಗೂ ಬರೀ 24 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಹಗರಣದ ದಿಕ್ಕು ತಪ್ಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ದ್ರೋಹ ಬಗೆಯುತ್ತಿದೆ. ಎಂದು ಮಾಜಿ ಸಚಿವ ರಾಜು ಗೌಡ ಕಿಡಿ ಕಾರಿದರು.
16 ಉದ್ಯಮಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ವರ್ಗಾವಣೆಯಾದ ಮೊತ್ತವು 4.12 ಕೋಟಿಯಿಂದ 5.98 ಕೋಟಿ ರೂ. ಆಗಿದೆ ಎಂದರು.
ಹಗರಣ ಬೆಳಕಿಗೆ ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.