Train ವಂದೇ ಭಾರತ್ ಟಿಕೆಟ್ ದರ ಇಳಿಕೆ: ಸೋಮಣ್ಣ
Team Udayavani, Jun 30, 2024, 6:53 AM IST
ಬೆಂಗಳೂರು: ವಂದೇ ಭಾರತ್ ರೈಲು ಸಹಿತ ಎಲ್ಲ ರೈಲುಗಳ ದರ ಪಟ್ಟಿ ಪರಿಷ್ಕರಣೆ ಮಾಡುವ ಚಿಂತನೆ ಇದೆ ಎಂದು ರೈಲ್ವೇ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು ಈ ಬಗ್ಗೆ ಪ್ರಧಾನಿ ಮೋದಿಯವರ ಜತೆಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಹೇಳಿದರು.
ಕನ್ನಡದವರಿಗೆ ಆದ್ಯತೆ
ಕರ್ನಾಟಕದಲ್ಲಿರುವ ರೈಲ್ವೇ ವಿಭಾಗ ಗಳಲ್ಲಿ ಕೆಲಸ ಮಾಡಲು ಕನ್ನಡದವರಿಗೆ ಆದ್ಯತೆ ನೀಡಲಾಗುತ್ತದೆ. ನಮ್ಮಲ್ಲಿ ಪರ ರಾಜ್ಯದವರು ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿ. ಸೋಮಣ್ಣ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.
49 ಕಾಮಗಾರಿ, 1,699 ಕೋ.ರೂ.
ಪ್ರಸ್ತುತ ರೈಲ್ವೇ ಇಲಾಖೆಯಿಂದ ರಾಜ್ಯ ದಲ್ಲಿ 1,699 ಕೋಟಿ ರೂ. ವೆಚ್ಚದ 93 ಆರ್‌ಒಬಿ-ಆರ್‌ಯುಬಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಇವುಗಳಲ್ಲಿ 49 ಕಾಮಗಾರಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವೆ ವೆಚ್ಚ ಹಂಚಿಕೆ ಆಧಾರದ ಮೇಲೆ ಅನುಮೋದನೆ ನೀಡಲಾಗಿದೆ. ರಾಜ್ಯದ ಪಾಲಿನ ಅನುದಾನ ಇಲ್ಲದ ಸಂದರ್ಭದಲ್ಲಿ ಭಾರತೀಯ ರೈಲ್ವೇ ಶೇ. 100ರಷ್ಟು ಧನ ಸಹಾಯದೊಂದಿಗೆ ಆರ್‌ಒಬಿ-ಆರ್‌ಯುಬಿ ಕಾಮಗಾರಿ ಮಾಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.