ರಾಜ್ಯಕ್ಕೂ ಮೂರು ವಂದೇ ಭಾರತ ರೈಲು
Team Udayavani, Feb 23, 2019, 12:30 AM IST
ಬೆಂಗಳೂರು: ರೈಲ್ವೇ ಇಲಾಖೆಯಿಂದ ಕರ್ನಾಟಕಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಸದ್ಯ ದಿಲ್ಲಿಯಿಂದ ವಾರಾಣಸಿ ನಡುವೆ ಆರಂಭವಾಗಿರುವ “ವಂದೇ ಭಾರತ’ ಎಕ್ಸ್‌ಪ್ರೆಸ್ ರೈಲು ಸೌಲಭ್ಯವನ್ನು ಕರ್ನಾಟಕದ ಮೂರು ಮಾರ್ಗಗಳಿಗೆ ವಿಸ್ತರಿಸುವ ಯೋಜನೆ ಇದೆ ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು- ಬೆಂಗಳೂರು, ಬೆಂಗಳೂರು-ಚೆನ್ನೈ, ಬೆಂಗಳೂರು- ಹೈದರಾಬಾದ್ ನಡುವೆ ವಂದೇ ಭಾರತ ರೈಲು ಓಡಿಸ ಲಾಗು ತ್ತದೆ ಎಂದು ಭರವಸೆ ನೀಡಿದ್ದಾರೆ. ಇತ್ತೀಚೆಗೆ ದಿಲ್ಲಿ- ವಾರಾಣಸಿ ನಡುವೆ ವಂದೇ ಭಾರತ ಸೆಮಿ ಹೈಸ್ಪೀಡ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದ್ದು, ಇದೇ ರೀತಿ 30 ರೈಲುಗಳ ಸಂಚಾರ ಸದ್ಯದಲ್ಲೇ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರು, ಮಂಗಳೂರಿನಿಂದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವುದು ಸೇರಿದೆ ಎಂದು ಹೇಳಿದರು. ಜತೆಗೆ ರಾಷ್ಟ್ರಾದ್ಯಂತ 100ಕ್ಕೂ ಹೆಚ್ಚು ವಂದೇ ಭಾರತ ಸೆಮಿ ಹೈಸ್ಪೀಡ್ ರೈಲುಗಳನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಆರು ತಿಂಗಳಲ್ಲಿ ಸಂಪೂರ್ಣ ವೈಫೈ
ಮುಂದಿನ ಆರು ತಿಂಗಳಲ್ಲಿ ಕರ್ನಾಟಕದ ಎಲ್ಲ ರೈಲು ನಿಲ್ದಾಣಗಳಲ್ಲೂ ವೈಫೈ ಸೌಲಭ್ಯ ಸಿಗಲಿದೆ ಎಂದೂ ಪಿಯೂಷ್ ಗೋಯಲ್ ಘೋಷಿಸಿದ್ದಾರೆ. ಜತೆಗೆ ದೇಶಾದ್ಯಂತ 1.2 ಲಕ್ಷ ಕಿ.ಮೀ. ಸ್ವದೇಶಿ ಆಟೋಮ್ಯಾಟಿಕ್ ಸಿಗ್ನಲಿಂಗ್ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕೋಲಾರದಲ್ಲಿ ಮೊದಲು ಕೋಚ್ ವರ್ಕ್‌ಶಾಪ್ ಪ್ರಾರಂಭಿಸಲು ಉದ್ದೇಶಿಸಿದ್ದೇವೆ. ಅನಂತರ ಬೇಡಿಕೆ ಹೆಚ್ಚಿದಲ್ಲಿ ಅದನ್ನು ಉನ್ನತ ದರ್ಜೆಗೇರಿಸಿ ಕೋಚ್ ಫ್ಯಾಕ್ಟರಿಯಾಗಿ ಪರಿವರ್ತಿಸಲಾಗುತ್ತದೆ ಎಂದು ತಿಳಿಸಿದರು.
ಎಚ್‌ಡಿಕೆ ನೋಡಿ ಚಟಾಕಿ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಡಬಲ್ ಎಂಜಿನ್ ರೈಲಿನಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದ ಪಿಯೂಷ್ ಗೋಯಲ್, ಕರ್ನಾಟಕದ ಜನ ಬಿಜೆಪಿಗೆ 104 ಸ್ಥಾನಗಳಿಂದ ಹೆಚ್ಚು ಸ್ಥಾನ ನೀಡಿದ್ದರೆ ಡಬಲ್ ಎಂಜಿನ್ ಮತ್ತಷ್ಟು ಚೆನ್ನಾಗಿ ಕಾರ್ಯ ನಿರ್ವಹಿಸು ತ್ತಿತ್ತು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರತ್ತ ನೋಟ ಬೀರಿ ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.