ಹಿರಿಯ ಸಾಹಿತಿ ಡಾ. ಕೋ. ಚೆನ್ನಬಸಪ್ಪ ವಿಧಿವಶ
Team Udayavani, Feb 23, 2019, 5:34 AM IST
ಬೆಂಗಳೂರು: ಹಿರಿಯ ವೈಚಾರಿಕ ಬರಹಗಾರರು ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಾ. ಕೋ. ಚೆನ್ನಬಸಪ್ಪ ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು ಮತ್ತು ಚೆನ್ನಬಸಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಕರ್ನಾಟಕ ಏಕಿಕರಣ ಹೋರಾಟದ ಸಂದರ್ಭದಲ್ಲಿ ಕೋ.ಚೆನ್ನಬಸಪ್ಪ ಅವರು ಮುಂಚೂಣಿಯಲ್ಲಿ ಇದ್ದರು. ಹಲವಾರು ಮೌಲ್ಯಾಧಾರಿತ ಚೆನ್ನಬಸಪ್ಪನವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಬಿಜಾಪುರದಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಹಂಪಿ ವಿ.ವಿ.ಯ ನಾಡೋಜ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರಿನಲ್ಲಿ ಹುಟ್ಟಿದ ಚೆನ್ನಬಸಪ್ಪನವರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ ಸೆರೆವಾಸವನ್ನೂ ಅನುಭವಿಸಿದ್ದರು. ಸೆರೆಯಿಂದ ಬಿಡುಗಡೆಗೊಂಡ ಬಳಿಕ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿದ್ದರು ಹಾಗೂ ಬೆಳಗಾವಿ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣವನ್ನು ಪಡೆದುಕೊಂಡಿದ್ದರು. ಮಾತ್ರವಲ್ಲದೆ ಚೆನ್ನಬಸಪ್ಪನವರು ಚರಿತ್ರೆ ಮತ್ತು ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಸಹ ಪಡೆದುಕೊಂಡಿದ್ದರು.
ಕನ್ನಡ ಸಾರಸ್ವತ ಲೋಕದ ಮಹಾನ್ ಪ್ರತಿಭೆ ಕೋ. ಚೆನ್ನಬಸಪ್ಪನವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವುಂಟಾಗಿದೆ. ಶ್ರೀಯುತರ ಆತ್ಮಕ್ಕೆ ಭಗವಂತ ಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ನಾಡೋಜ ಮನು ಬಳಿಗಾರ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಏಕೀಕರಣದ ಹೋರಾಟಗಾರ,
ಕನ್ನಡ ಪ್ರಜ್ಞೆಯನ್ನು ಉಸಿರಾಗಿಸಿಕೊಂಡ ಹಿರಿಜೀವ,
ಕುವೆಂಪು ಅವರ ಪರಮಾಪ್ತ ಶಿಷ್ಯ, ವೈಯಕ್ತಿಕವಾಗಿ ಸದಾ ನನಗೆ ಮಾರ್ಗದರ್ಶನ ನೀಡುತ್ತಿದ್ದ ಹಿತೈಷಿ ಕೋ.ಚೆನ್ನಬಸಪ್ಪನವರ ಅಗಲಿಕೆಯ ಸುದ್ದಿ ಆಘಾತವನ್ನುಂಟು ಮಾಡಿದೆ. ಆ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ. pic.twitter.com/7qx7BRGDz5— Siddaramaiah (@siddaramaiah) February 23, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.