ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
Team Udayavani, May 27, 2024, 6:45 AM IST
ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸು
ತ್ತಿದ್ದು, ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲಿದ್ದಾರೆ.
ಬೆಳಗಾವಿಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ -ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (ಐಸಿಎಂಆ – ಎನ್‌ಐಟಿಎಂ) ಸಂಸ್ಥೆಯು ಸೋಮವಾರ 18ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಭಾರತ ಸರಕಾರದ ಕಾರ್ಯದರ್ಶಿ ಡಾ| ರಾಜೀವ್ ಬಹ್ಲ, ಕೇಂದ್ರ ಆರೋಗ್ಯ ಸಂಶೋಧನ ಇಲಾಖೆಯ ಜಂಟಿ ಕಾರ್ಯದರ್ಶಿ ಅನು ನಗರ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರ ಬೆಳಗಾವಿಯ ಐಸಿಎಂಆರ್-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (ಎನ್‌ಐಟಿಎಂ) ಸಂಸ್ಥಾಪನಾ ದಿನಾಚರಣೆ, ಬೆಳಗಾವಿಯ ಕೆಎಲ್ ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಬಳಿಕ ಬೆಂಗಳೂರಿನಲ್ಲಿ ಸಿಎಸ್‌ಐಆರ್-ನ್ಯಾಶನಲ್ ಏರೋ ನಾಟಿಕ್ಸ್ ಲಿಮಿಟೆಡ್‌ಗೆ ಭೇಟಿ ನೀಡಲಿದ್ದಾರೆ. ಜಗದೀಪ್ ಧನಕರ್ ಸಿಎಸ್‌ಐಆರ್-ಎನ್‌ಎಎಲ್‌ಬೇಲೂರು ಕ್ಯಾಂಪಸ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಕೆಲವು ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದಾರೆ. ಎಲ್‌ಸಿಎ ಘಟಕಗಳು ಮತ್ತು ಸಾರ್ಸ್‌ನ ಪ್ರದರ್ಶನ ವೀಕ್ಷಿಸಲಿದ್ದಾರೆ. ಪ್ರವಾಸದ ವೇಳೆ ಬೆಂಗಳೂರಿನ ರಾಜಭವನಕ್ಕೂ ಭೇಟಿ ನೀಡಲಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.