Vidhana Soudha ಕಾಂಗ್ರೆಸ್ ಕಚೇರಿಯಾ?: ಆರ್. ಅಶೋಕ್
Team Udayavani, Sep 1, 2024, 1:37 AM IST
ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರಕಾರವೇ ಪ್ರತಿ ಭಟನೆ ನಡೆಸುವುದೆಂದರೆ ಆಡಳಿತ ವ್ಯವಸ್ಥೆಯ ಸಂಪೂರ್ಣ ವೈಫಲ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ, ಜನಾರ್ದನ ರೆಡ್ಡಿ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್ ಕಚೇರಿಯಾಗಿತ್ತೇ? ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದು ಸವಾಲು ಹಾಕಿದರು.
ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರ ದಿಂದ ಮೆರೆಯುವ ಕಾಂಗ್ರೆಸ್ ನಾಯಕರು, ಈ ಸರಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿ¨ªಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿಗೆ ನಂಬಿಕೆ ಇಲ್ಲ ಎಂಬುದು ಅವರ ಹೇಳಿಕೆಗಳಿಂದಲೇ ದೃಢ ಪಡುತ್ತಿದೆ ಎಂದು ವ್ಯಂಗ್ಯವಾಡಿದರು.
ಟಿಕೆಟ್ ಕೊಡಿಸುವುದು ನಮ್ಮ ಕೈಯಲ್ಲಿಲ್ಲ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಟಿಕೆಟ್ ಕೊಡಿಸುವುದಾಗಲಿ, ತಪ್ಪಿಸುವುದಾಗಲಿ ನನ್ನ ಕೈಯಲ್ಲಿಲ್ಲ. ವರಿಷ್ಠರ ಮಾತೆಂದರೆ ನಮಗೆ ತಾಯಿ ಮಾತಿದ್ದಂತೆ ಎಂದು ಅಶೋಕ್ ತಿಳಿಸಿದರು. ಕಾಂಗ್ರೆಸನ್ನು ಸೋಲಿಸುವುದು ನಮ್ಮ ಗುರಿ. ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.