ವಿಧಾನಸೌಧ: 250ಕ್ಕೂ ಹೆಚ್ಚು ನಕಲಿ ಪಾಸ್‌ಗಳು ಪತ್ತೆ
Team Udayavani, Jul 15, 2023, 10:04 AM IST
ಬೆಂಗಳೂರು: ಇತ್ತೀಚೆಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸಭೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಕುರ್ಚಿಯಲ್ಲಿ ಕುಳಿತ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿಧಾನಸೌಧ ಪ್ರವೇಶ ದ್ವಾರದಲ್ಲಿ ಪೊಲೀಸರು ತಪಾಸಣೆ ಚುರುಕುಗೊಳಿಸಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ 250ಕ್ಕೂ ಹೆಚ್ಚು ನಕಲಿ ಪಾಸ್ ಗಳು ಪತ್ತೆಯಾಗಿವೆ. ಅಲ್ಲದೆ, ಶಾಸಕರು, ಸಚಿವರ ಹೆಸರಿನ ಪಾಸ್‌ಗಳನ್ನು ಕಲರ್ ಜೆರಾಕ್ಸ್ ಮಾಡಿಸಿ ಭದ್ರತಾ ಸಿಬ್ಬಂದಿಗೆ ಯಾಮಾರಿಸುತ್ತಿದ್ದ ಸಂಚು ಬಹಿರಂಗಗೊಂಡಿದೆ.
ವಿಧಾನಸೌಧ ಪ್ರವೇಶಕ್ಕೆ ಶಾಸಕರು, ಸಚಿವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಅದೇ ರೀತಿ ಅವರ ಸಿಬ್ಬಂದಿ ಮತ್ತು ವಾಹನಗಳಿಗೂ ಅಧಿಕೃತ ಪಾಸ್ ನೀಡಲಾಗುತ್ತದೆ. ಅದನ್ನು ದುರ್ಬಳಕೆ ಮಾಡಿಕೊಳ್ಳುವ ವಂಚಕರು, ಈ ಪಾಸ್‌ಗಳನ್ನು ದುರ್ಬಳಕೆ ಮಾಡಿಕೊಂಡು ಕಲರ್ ಜೆರಾಕ್ಸ್ ಮಾಡಿ ಒಳ ಪ್ರವೇಶಿಸುತ್ತಿರುವುದು ಪತ್ತೆಯಾಗಿದೆ. ಹೀಗೆ ಕಳೆದ 4-5 ದಿನಗಳಲ್ಲಿ ಸುಮಾರು 300 ಮಂದಿ ಈ ರೀತಿ ನಕಲಿ ಪಾಸ್‌ಗಳನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಿರುವುದು ಪತ್ತೆಯಾಗಿದೆ.
ನಕಲಿ ಪಾಸ್‌ಗಳು ಮಾತ್ರವಲ್ಲ, ಅವಧಿ ಮೀರಿದ ಪಾಸ್‌ಗಳು ತಪಾಸಣೆ ವೇಳೆ ಸಿಕ್ಕಿವೆ. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಜನಪ್ರತಿನಿಧಿಗಳು ಮತ್ತು ಅವರ ಸಿಬ್ಬಂದಿಗೂ ಮಾಹಿತಿ ನೀಡಿ ನಕಲಿ ಪಾಸ್‌ಗಳ ಕಡಿವಾಣಕ್ಕೆ ಸಹಾಯ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜುಲೈ 10ರಂದು ಬಜೆಟ್ ಮಂಡನೆ ವೇಳೆ ತಿಪ್ಪೇರುದ್ರಸ್ವಾಮಿ ಎಂಬಾತ ದೇವದುರ್ಗ ಶಾಸಕಿ ಕೆರೆಮ್ಮ ಸ್ಥಾನದಲ್ಲಿ ಕೆಲ ಹೊತ್ತು ಕುಳಿತುಕೊಂಡಿರುವುದು ಪತ್ತೆಯಾಗಿತ್ತು. ಹೀಗಾಗಿ ವಿಧಾನಸೌಧ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ ಎಸ್ .ಡಿ.ಶರಣಪ್ಪ, ಎಲ್ಲ ಪ್ರವೇಶ ದ್ವಾರದಲ್ಲಿ ತಪಾಸಣೆ ಬಿಗಿಗೊಳಿಸಿದರು.
ಮತ್ತೂಂದೆಡೆ ಅದೇ ದಿನ ಜು. 10ರಂದು ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಉದ್ಯೋಗಿ ಬ್ಯಾಗಿನಲ್ಲಿ ಚಾಕು ಇರುವುದು ಪತ್ತೆಯಾಗಿದ್ದು, ಪೊಲೀಸ್ ವಿಚಾರಣೆ ವೇಳೆ ಕ್ರಿಮಿನಲ್ ಉದ್ದೇಶವಿಲ್ಲದಿರುವುದು ಕಂಡು ಬಂದಿದ್ದರಿಂದ ಮುಚ್ಚಳಿಕೆ ಪತ್ರ ಬರೆಸಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಹೀಗಾಗಿ ವಿಧಾನಸೌಧಕ್ಕೆ ಪ್ರವೇಶಿಸುವ ಎಲ್ಲಾ ಗೇಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.
ಅಲ್ಲದೆ, ಬ್ಯಾಗ್ ಸೇರಿ ಇತರೆ ವಸ್ತುಗಳನ್ನು ಇಟ್ಟುಕೊಂಡು ಅನುಮಾನಸ್ಪದವಾಗಿ ಬರುವ ಎಲ್ಲರನ್ನು ಲೋಹಪರಿಶೋಧಕ ಯಂತ್ರಗಳ ಪರೀಕ್ಷೆ ಒಳಪಡಿಸಬೇಕು. ಅಲ್ಲದೆ, ಬ್ಯಾಗ್‌ಗಳನ್ನು ಕಡ್ಡಾಯವಾಗಿ ಸ್ಕಾನಿಂಗ್‌ಗೆ ಒಳಪಡಿಸಬೇಕು. ಅಧಿಕೃತ ಗುರುತಿನ ಚೀಟಿ ಅಥವಾ ಪಾಸ್ ಇದ್ದರೆ ಮಾತ್ರ ಒಳಪ್ರವೇಶಿಸಲು ಬಿಡಬೇಕು ಎಂದು ಮಾರ್ಷಲ್‌ಗಳಿಗೂ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಈ ಕುರಿತು ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ ಎಸ್.ಡಿ.ಶರಣಪ್ಪ, ಮುಂದಿನ ದಿನಗಳಲ್ಲಿ ನಕಲಿ ಪಾಸ್ ಬಳಸಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.