ವಜ್ರ ಮಹೋತ್ಸವಕ್ಕೆ ಸಿಂಗಾರಗೊಳ್ಳುತ್ತಿದೆ ವಿಧಾನಸೌಧ


Team Udayavani, Oct 24, 2017, 7:32 AM IST

24-6.jpg

ಬೆಂಗಳೂರು: ವಜ್ರ ಮಹೋತ್ಸವ ಸಮಾರಂಭಕ್ಕಾಗಿ ಶಕ್ತಿಕೇಂದ್ರ ವಿಧಾನಸೌಧ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ವಿಧಾನಸೌಧಕ್ಕೆ ವಿಶೇಷ ಕಳೆ ಬಂದಿದೆ. ವಿಧಾನಸೌಧದ ಎಲ್ಲ ಪ್ರವೇಶ ದ್ವಾರಗಳನ್ನು ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ ಕಮಾನುಗಳಿಂದ ಸಿಂಗರಿಸಲಾಗಿದ್ದು, “ವಿಧಾನಸೌಧ 60ರ ಸಂಭ್ರಮ’ ಎಂಬ ಆಕರ್ಷಕ ಫ‌ಲಕಗಳನ್ನು ವಿಧಾನಸೌಧ ಸುತ್ತ ಅಳವಡಿಸಲಾಗಿದೆ.

ವಿಧಾನಸೌಧ ಒಳಗೆ ಬಣ್ಣ ಬಳಿಯುವ ಹಾಗೂ ಸ್ವತ್ಛತಾ ಕಾರ್ಯ ಭರದಿಂದ ಸಾಗಿದ್ದು, ಸ್ಪೀಕರ್‌, ಸಭಾಪತಿ ಕಚೇರಿ, ಸಂಪುಟ ಸಭಾಂಗಣ, ಬಾಂಕ್ವೆಟ್‌ ಸಭಾಂಗಣ, ವಿಧಾನಸಭೆ ಮತ್ತು ವಿಧಾನಪರಿಷತ್‌ ಪ್ರವೇಶ ದ್ವಾರಗಳನ್ನು ಬಗೆ ಬಗೆಯ ಹೂವಿನಿಂದ ಅಲಂಕರಿಸಲಾಗಿದೆ. ವಿಧಾನಸೌಧ ಮುಂಭಾಗ ಬೃಹತ್‌ ವೇದಿಕೆ ನಿರ್ಮಿಸಲಾಗಿದ್ದು, ಗಣ್ಯರು-ಅತಿ ಗಣ್ಯರಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದೆ. ಸಮಾರಂಭ ಹೊರಗಿನಿಂದಲೂ ನೋಡುವಂತೆ ದೊಡ ಪರದೆಯ ಟಿವಿ ಅಳವಡಿಸಲಾಗುತ್ತದೆ. ರಾತ್ರಿ ವೇಳೆ ವಿಧಾನಸೌಧ ಸಂಪೂರ್ಣವಾಗಿ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದು, ದೀಪಾಲಂಕಾರದಲ್ಲಿ ವಿಧಾನಸೌಧ ಸೊಬಗು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ವಿಶೇಷವಾಗಿದೆ.  ಪಾಲಂಕಾರಗಳಿಂದ ಕಂಗೊಳಿಸುತ್ತಿರುವ ವಿಧಾನಸೌಧ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದರಿಂದ ಸೋಮವಾರ ರಾತ್ರಿಯೂ ಸಾಕಷ್ಟು ಜನರು ವಿಧಾನಸೌಧ ನೋಡಲು ಆಗಮಿಸಿ ಸೆಲ್ಫಿ ತೆಗೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ದಿನವಿಡೀ ಕಾರ್ಯಕ್ರಮ
ವಜ್ರ ಮಹೋತ್ಸವ ಸಮಾರಂಭವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿರುವುದರಿಂದ ಅ.25ರಂದು ರಾಷ್ಟ್ರಪತಿಯವರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಭಾಷಣ ಮುಗಿದ ತಕ್ಷಣ ವಿಧಾನಸೌಧ ಮುಂಭಾಗ ದಿನವಿಡೀ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಧಾನಸೌಧ ನಿರ್ಮಾಣಕ್ಕೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್‌ ಹನುಮಂತಯ್ಯ, ಕೆ.ಸಿ.ರೆಡ್ಡಿ, ಕಡಿದಾಳ್‌ ಶಾಮಣ್ಣ ಅವರ ಕುಟುಂಬದವರಿಗೆ ಬಾಂಕ್ವೆಟ್‌ ಸಭಾಂಗಣದಲ್ಲಿ ಸನ್ಮಾನ ಏರ್ಪಡಿಸಲಾಗಿದ್ದು ಈಗಾಗಲೇ ಆಹ್ವಾನ ಕಳುಹಿಸಲಾಗಿದೆ. ಎಲ್ಲ ಶಾಸಕರು, ಪರಿಷತ್‌ ಸದಸ್ಯರು, ಸಂಸದರು, ಕೇಂದ್ರ ಸಚಿವರು, ಹಿರಿಯ ರಾಜಕಾರಣಿಗಳಿಗೆ ಆಹ್ವಾನ ನೀಡಲಾಗಿದೆ.

ಟಿ.ಎನ್‌.ಸೀತಾರಾಂ ಅಸಮಾಧಾನ
ವಜ್ರ ಮಹೋತ್ಸವದ ಸಂದರ್ಭದಲ್ಲಿ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಹೆಚ್ಚು ಮೊತ್ತ ನೀಡಲಾಗಿದೆ ಎಂದು ವಿವಾದ ಉಂಟಾಗಿದ್ದರಿಂದ “ವಿಧಾನಸಭೆ ನಡೆದು ಬಂದ ಹಾದಿ’ ಸಾಕ್ಷ್ಯಚಿತ್ರ ನಿರ್ಮಾಣದ ಹೊಣೆ ಹೊತ್ತಿದ್ದ ನಿರ್ದೇಶಕ ಟಿ.ಎನ್‌.ಸೀತಾರಾಂ ಅಸಮಾಧಾನ ಗೊಂಡಿದ್ದಾರೆ. ಶಾಸನಸಭೆ ನಡೆದುಬಂದ ದಾರಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಏಳು ಚಿತ್ರದ ಪೈಕಿ ಎರಡನ್ನು ಮುಗಿಸಿದ್ದೇನೆ. ಅವರಿಗೆ ಅದನ್ನು ಕೊಟ್ಟು ಕೈ ಮುಗಿದು ಬರುತ್ತೇನೆ. ಮಿಕ್ಕ ಐದು ಚಿತ್ರ ಮಾಡಲಾರೆ. ಅವರು ಹಿಂದೆ ಹೇಳಿದಂತೆ ಪೂರ್ತಿ ಹಣ ಕೊಡುತ್ತೇನೆ ಎಂದರೂ ನನಗೆ ಬೇಡ. ಬೇರೆ ಯಾರಿಗಾದರೂ ಕೊಟ್ಟುಕೊಳ್ಳಲಿ. ಸರ್ಕಾರದ ಸಹವಾಸ ಬೇಡ. ಅವರು ಕರೆದಾಗ ನಾನು ಒಪ್ಪಬಾರದಿತ್ತು. ಒಳ್ಳೆಯ ಪ್ರೊಡಕ್ಟ್ ಮಾಡಲು ಹೋಗಿ ತೀವ್ರ ಅವಮಾನ ಮತ್ತು ನೋವು ಅನುಭವಿಸಿದೆ‌ ಎಂದು ಸಾಮಾಜಿಕ ಜಾಲತಾಣ “ಫೇಸ್‌ಬುಕ್‌’ನಲ್ಲಿ ಅತೃಪ್ತಿ ಹೊರಹಾಕಿದ್ದಾರೆ. ಉಳಿದಂತೆ ಗಿರೀಶ್‌ ಕಾಸರವಳ್ಳಿ “ವಿಧಾನಸೌಧ ಕಟ್ಟಡ ನಿರ್ಮಾಣ’ ಕುರಿತು ಹಾಗೂ ಮಾಸ್ಟರ್‌ ಕಿಶನ್‌ ವಿಧಾನಸೌಧ 3 ಡಿ ವಚ್ಯುìಯೆಲ್‌ ರಿಯಾಲಿಟಿ ಸಾಕ್ಷ್ಯಚಿತ್ರ ಸಿದ್ಧಪಡಿಸಿದ್ದು ನಿಗದಿಯಂತೆ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.