ವಿಜಯಕುಮಾರ್ ಎಂ. ಶೀಲವಂತ್ ನೂತನ ಎಸ್ಪಿಪಿ
Team Udayavani, Sep 12, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರಿ ಅಭಿಯೋಜಕರನ್ನಾಗಿ ವಕೀಲ ವಿಜಯಕುಮಾರ್ ಎಂ.ಶೀಲವಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಎಸ್ಪಿಪಿ ಎಚ್.ಎಸ್. ಚಂದ್ರಮೌಳಿ ಅವರ ರಾಜೀನಾಮೆಯಿಂದ ತೆರವಾದ ಹುದ್ದೆಗೆ ಶೀಲವಂತ್ ಅವರನ್ನು ನೇಮಕ ಮಾಡಿ, ರಾಜ್ಯ ಕಾನೂನು ಇಲಾಖೆಯ ಅಧೀನ ಕಾರ್ಯದರ್ಶಿ ಬುಧವಾರ ಆದೇಶ ಹೊರಡಿಸಿ ದ್ದಾರೆ. ಹುದ್ದೆಯ ಅಧಿಕಾರ ವಹಿಸಿಕೊಳ್ಳುವ ದಿನದಿಂದ 2 ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಶೀಲವಂತ್ ಅವರು, ಎಸ್ಪಿಪಿ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.