ವಿರೋಧದ ನಡುವೆಯೂ ವಿಜಯನಗರ ನಕ್ಷೆ ಸಿದ್ಧ
Team Udayavani, Oct 3, 2019, 3:04 AM IST
ಬಳ್ಳಾರಿ: ವಿಜಯನಗರ ಜಿಲ್ಲೆ ಮಾಡಲು ಪರ-ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯ ನಕ್ಷೆ ಸಿದ್ಧಪಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈಚೆಗೆ ಸೇರಿಸಲಾದ ಹರಪನಹಳ್ಳಿ ಸೇರಿ ಒಟ್ಟು 11 ತಾಲೂಕು, 10 ವಿಧಾನಸಭಾ ಕ್ಷೇತ್ರಗಳಿವೆ. ಈ 11 ತಾಲೂಕುಗಳಲ್ಲಿ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ, ಕೊಟ್ಟೂರು, ಹರಪನಹಳ್ಳಿ ಸೇರಿ ಒಟ್ಟು ಆರು ತಾಲೂಕುಗಳನ್ನು ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ, ವಿಜಯನಗರ ಜಿಲ್ಲೆಯನ್ನಾಗಿ ರೂಪಿಸಿ ನಕ್ಷೆ ಸಿದ್ಧಪಡಿಸಲಾಗಿದೆ.
ಇನ್ನುಳಿದ ಬಳ್ಳಾರಿ, ಸಿರುಗುಪ್ಪ, ಕುರುಗೋಡು, ಸಂಡೂರು, ಕೂಡ್ಲಿಗಿ ತಾಲೂಕುಗಳನ್ನು ಬಳ್ಳಾರಿ ಜಿಲ್ಲೆಯಲ್ಲೇ ಮುಂದುವರಿಸಲಾಗಿದೆ. ಜಿಲ್ಲೆ ವಿಭಜನೆಗೆ ಸಂಬಂಧಿ ಸಿದಂತೆ ಈಗಾಗಲೇ ಬಳ್ಳಾರಿ ಜಿಲ್ಲಾ ಧಿಕಾರಿಗಳಿಂದ ವರದಿಯನ್ನು ತರಿಸಿಕೊಂಡಿರುವ ರಾಜ್ಯ ಸರ್ಕಾರ, ವಿಜಯನಗರ ಜಿಲ್ಲೆ ರಚನೆಗೆ ಪರ -ವಿರೋಧದ ನಡುವೆಯೂ ಬಳ್ಳಾರಿಯನ್ನು ಎರಡು ಜಿಲ್ಲೆಗಳನ್ನಾಗಿ ವಿಭಜಿಸಿ ನಕ್ಷೆಯನ್ನು ಸಿದ್ಧಪಡಿಸಿರುವುದು ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.