Vijayapura:ಕಾರ್ಮಿಕರ ರಕ್ಷಣೆಗೆ ಕಲಬುರಗಿ, ಬೆಳಗಾವಿಯಿಂದ ಎಸ್.ಡಿ.ಆರ್.ಎಫ್. ಬುಲಾವ್

ಅವಸರದ ಕಾರ್ಯಾಚರಣೆ ಸಾಧ್ಯವಿಲ್ಲದಾಗಿದೆ....

Team Udayavani, Dec 4, 2023, 10:42 PM IST

1-sdsadsad

ವಿಜಯಪುರ: ಕೈಗಾರಿಕಾ ಪ್ರದೇಶದ ಆಹಾರ ಧಾನ್ಯ ಘಟಕದಲ್ಲಿ ಅಪಾಯಕ್ಕೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗಾಗಿ ಕಲಬುರಗಿ, ಬೆಳಗಾವಿಯಿಂದ ಎಸ್.ಡಿ.ಆರ್.ಎಫ್. ತಂಡಗಳನ್ನು ಕರೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಕಾರ್ಮಿಕರ ರಕ್ಷಣ ಕಾರ್ಯಾಚರಣೆ ಸ್ಥಳದಲ್ಲಿ ಪರಿಸ್ಥಿತಿ ಅವಲೋಕನದ ಬಳಿಕ ರಾತ್ರಿ 10-15 ಕ್ಕೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಕಾರ್ಮಿಕರು ಅಪಾಯಕ್ಕೆ ಸಿಲುಕಿರುವ ಸ್ಥಳದ ಗೋದಾಮಿನ ಧಾನ್ಯಗಳ ದಾಸ್ತಾನು ಹೆಚ್ಚಿನ ಪ್ರಮಾಣದಲ್ಲಿದೆ. ಹೀಗಾಗಿ ಅವಸರದ ಕಾರ್ಯಾಚರಣೆ ಸಾಧ್ಯವಿಲ್ಲದಾಗಿದೆ ಎಂದರು.

ಇದರ ಹೊರತಾಗಿಯೂ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಅಗ್ನಿಶಾಮಕ ತಂಡ, ಪೊಲೀಸ್, ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಸುಮಾರು 100 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 4 ಕ್ರೇನ್ ಹಾಗೂ 4 ಜೆಸಿಬಿ ಯಂತ್ರಗಳನ್ನು ರಕ್ಷಣ ಕಾರ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಅಪಾಯದಲ್ಲಿರುವ ಕಾರ್ಮಿಕರಿಗೆ ಉಸಿರಾಟದ ಸಮಸ್ಯೆ ಆಗದಂತೆ ನೋಡಿಕೊಳ್ಳು ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಮಾಡುತ್ತಿದ್ದೇವೆ. ಮತ್ತೊಂದೆಡೆ ಕಾರ್ಮಿಕರ ಸುರಕ್ಷತೆಗಾಗಿ ಸ್ಥಳಕ್ಕೆ ಕಲಬುರಗಿ ಹಾಗೂ ಬೆಳಗಾವಿಯಿಂದ ಎಸ್.ಡಿ.ಆರ್.ಎಫ್. ತಂಡಗಳ ಆಗಮನಕ್ಕೆ ಕರೆ ನೀಡಲಾಗಿದೆ. ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮವಾಗಿ ಹೈದರಾಬಾದ್ ಹಾಗೂ ಪುಣೆಯಿಂದ ಎನ್‌.ಡಿ.ಆರ್.ಎಫ್. ತಂಡಗಳಿಗೂ ಕರೆ‌ ನೀಡಲಾಗುತ್ತಿದೆ ಎಂದು ವಿವರಿಸಿದರು.

ಲಭ್ಯವಾಗಿರುವ ಮಾಹಿತಿಯಂತೆ ಸುಮಾರು 10-12 ಕಾರ್ಮಿಕರು ಧಾನ್ಯಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಘಟನೆ ಹಂತದಲ್ಲಿ ಪಾರಾಗಿರುವ ಮೂವರು ಹಾಗೂ ಕಾರ್ಯಾಚರಣೆ ಹಂತದಲ್ಲಿ ರಕ್ಷಿಸಲ್ಪಟ್ಟ ಓರ್ವ ಕಾರ್ಮಿಕ ಸೇರಿ ನಾಲ್ವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ಮಾಹಿತಿ ನೀಡಿದರು.

ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.