ಬೆಂಗಳೂರು 1 ಮಾದರಿಯಲ್ಲಿ ಗ್ರಾಮ 1

Team Udayavani, Mar 6, 2020, 3:05 AM IST

bangalore1

ಸರ್ಕಾರದ ಎಲ್ಲ ಸೇವೆಗಳನ್ನು ಒಂದೇ ಸೂರಿನಡಿ ತರಲು ಬೆಂಗಳೂರು-1, ಕರ್ನಾಟಕ-1 ಮಾದರಿಯಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಗ್ರಾಮ-1 ಕೇಂದ್ರಗಳು ಸರ್ಕಾರದ ವಿವಿಧ ಯೋಜನೆಗಳ, ರಾಜ್ಯದ ವಿವಿಧ ಕೃಷಿ ಮಾರುಕಟ್ಟೆ, ಮಂಡಿ ದರಗಳ ಪ್ರಚಾರ ಮಾಡುವುದರ ಜೊತೆಗೆ, ಸಕಾಲ ಹಾಗೂ ಸೇವಾಸಿಂಧು ಯೋಜನೆಗಳ ಸೇವೆ, ಸಾರ್ವಜನಿಕ ಕುಂದುಕೊರತೆಗಳ ಸ್ವೀಕಾರ ಮತ್ತು ಮಾಹಿತಿ ಹಕ್ಕು ಕಾಯ್ದೆಯಡಿ ಆನ್‌ಲೈನ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಿದೆ.

ರಾಜ್ಯದ ನಾಗರಿಕರು ಜಾಲತಾಣದ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲು ಮತ್ತು ಮಾಹಿತಿ ಪಡೆಯಲು ಸಾಧ್ಯವಾಗುವ ನಿಟ್ಟಿನಲ್ಲಿ ಮಾಹಿತಿ ಕಣಜ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಅನುಷ್ಠಾನ ಗೊಳಿಸಲಾಗುವುದು. ಈ ಏಕರೂಪ ತಂತ್ರಾಂಶ ಎಲ್ಲ ಇಲಾಖೆ, ಸಂಸ್ಥೆಗಳಿಗೆ ವಿಸ್ತರಿಸಲಾಗುವುದು. ಸಕಾಲ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು.

ಸಾರ್ವಜನಿಕರಿಗೆ ಒದಗಿಸಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ತಕ್ಷಣ ಒದಗಿಸುವ ಸಿದ್ಧ-ಸೇವೆ ಯೋಜನೆ ಯನ್ನು ರೂಪಿಸಿ ಈ ಸಾಲಿನಿಂದ ಅನು ಷ್ಠಾನ ಗೊಳಿಸಲಾಗುವುದು. ಈ ಉದ್ದೇಶಕ್ಕಾಗಿ ಮೂರು ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.  ಜನರು ತಮ್ಮ ದೈನಂದಿನ ಬದುಕಿನಲ್ಲಿ ಸರ್ಕಾರದಿಂದ ಪಡೆಯುವ ವಿವಿಧ ಸೇವೆಗಾಗಿ ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

ಸೇವೆಗಳನ್ನು ಆನ್‌ಲೈನ್‌ ಮೂಲಕ ಒದಗಿಸುವುದಲ್ಲದೆ, ಹೆಚ್ಚೆಚ್ಚು ಸೇವೆಗಳನ್ನು ಸಕಾಲ ಯೋಜನಾ ವ್ಯಾಪ್ತಿಗೆ ತರುವ ಮೂಲಕ ಜನರಿಗೆ ಆಗುವ ಅನಾನೂಕುಲ ತಪ್ಪಿಸಲು ಉದ್ದೇಶಿಸಲಾಗಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ, ಸಾರ್ವಜನಿಕರ ದೂರು ಸ್ವೀಕರಿಸಿ, ಕುಂದುಕೊರತೆ ನಿವಾರಿಸಲೂ ಸಹ ಆದ್ಯತೆ ನೀಡಲಾಗುವುದು. ನಾಗರಿಕ ಸ್ನೇಹಿ ಸೇವಾ ಪೂರೈಕೆ ವ್ಯವಸ್ಥೆಯನ್ನು ಗ್ರಾಮ ಮಟ್ಟದ ವರೆಗೆ ವಿಸ್ತರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.

ಬೆಂಗಳೂರಿನ ಆಯ್ದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿರುವ ಜನಸೇವಕ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಹಾಗೂ ರಾಜ್ಯ ಎಲ್ಲ ಮಹಾನಗರ ಪಾಲಿಕೆಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯ ಸೇವಾ ವೆಚ್ಚದಲ್ಲಿ ವಿಸ್ತರಿಸಲು ನಿರ್ಧರಿಸಿದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.