ಬಹುಹಂತ ಚುನಾವಣೆ: ಅಕ್ಟೋಬರ್ ಕೊನೆಯಲ್ಲಿ 5,800 ಗ್ರಾ.ಪಂ.ಗಳಿಗೆ ಮತದಾನ
Team Udayavani, Aug 31, 2020, 8:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
– ರಫೀಕ್ ಅಹ್ಮದ್
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದ 5,800 ಗ್ರಾ.ಪಂ.ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ಸಿದ್ಧತೆ ಚುರುಕುಗೊಳಿಸಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಸುರಕ್ಷೆ, ಮುಂಜಾಗ್ರತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕಾಗಿ ಬಹು ಹಂತಗಳಲ್ಲಿ ಚುನಾವಣೆ ನಡೆಸುವ ಸಾಧ್ಯತೆಯಿದೆ.
ಸಾಮಾನ್ಯ ಪರಿಸ್ಥಿತಿಯಲ್ಲಿ ಈ 5,800 ಗ್ರಾ.ಪಂ.ಗಳಿಗೆ 2 ಅಥವಾ 3 ಹಂತಗಳಲ್ಲಿ ಮತದಾನ ನಡೆಯುತ್ತದೆ.
ಇದನ್ನು ಕಂದಾಯ ವಲಯವಾರು ವಿಭಜಿಸಲಾಗುತ್ತಿತ್ತು. ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕುವಾರು ವಿವಿಧ ಹಂತಗಳಲ್ಲಿ ಚುನಾವಣೆ ನಡೆಸಬೇಕು ಎಂದು ಜಿಲ್ಲಾಡಳಿತಗಳಿಂದ ಸಲಹೆ ಬಂದಿದೆ ಎನ್ನಲಾಗಿದೆ.
ಸಮಾಲೋಚನೆ ವೇಳೆ ಜನದಟ್ಟಣೆ ಕಡಿಮೆ ಮಾಡಲು ಮತ್ತು ಸಿಬಂದಿ ಸಂಚಾರ, ಮತದಾರರ ಪ್ರಯಾಣಕ್ಕೆ ಮಿತಿ ಹಾಕಲು ಜಿಲ್ಲೆಗಳ ಮಟ್ಟದಲ್ಲಿ ಎರಡರಿಂದ ಮೂರು ಹಂತಗಳಲ್ಲಿ ತಾಲೂಕುವಾರು ಆಗಿ ವಿಭಜಿಸಿ ಚುನಾವಣೆ ನಡೆಸಿದರೆ ಸೂಕ್ತ ಎಂಬ ಅಭಿಪ್ರಾಯ ಬಂದಿದೆ ಎನ್ನಲಾಗಿದೆ.
ಸಿಬಂದಿ, ವೆಚ್ಚ ಹೆಚ್ಚಳ
2015ರಲ್ಲಿ 176 ತಾಲೂಕುಗಳ 5,855 ಗ್ರಾ.ಪಂ.ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗಿತ್ತು. ಈಗ 226 ತಾಲೂಕುಗಳ 5,800 ಗ್ರಾ.ಪಂ.ಗಳ 93 ಸಾವಿರಕ್ಕೂ ಹೆಚ್ಚು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಬೇಕಾಗಿದೆ. ಇದಕ್ಕಾಗಿ ಸಾಮಾನ್ಯ ಪರಿಸ್ಥಿತಿಯಲ್ಲಿ 40 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಬೇಕಾಗುತ್ತದೆ.
ಕೋವಿಡ್ 19 ಹಿನ್ನೆಲೆಯಲ್ಲಿ 10 ಸಾವಿರ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಬೇಕಿದೆ. ಅದಕ್ಕೆ ತಕ್ಕಂತೆ 50 ಸಾವಿರ ಹೆಚ್ಚುವರಿ ಚುನಾವಣ ಸಿಬಂದಿ, 10 ಸಾವಿರ ಪೊಲೀಸ್ ಸಿಬಂದಿ, 50 ಸಾವಿರ ಆರೋಗ್ಯ ಕಾರ್ಯಕರ್ತೆಯರು ಬೇಕು. ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆಗೆ 35 ಕೋಟಿ ರೂ., ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆಗೆ 20 ಕೋಟಿ ರೂ. ಮತ್ತು ಸಾರಿಗೆ ವ್ಯವಸ್ಥೆಗೆ 10 ಕೋಟಿ ರೂ. ಸೇರಿ ಹೆಚ್ಚುವರಿಯಾಗಿ 65 ಕೋಟಿ ರೂ. ಬೇಕಾಗುತ್ತದೆ ಎಂದು ಆಯೋಗ ಲೆಕ್ಕಾಚಾರ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.