ನೀತಿ ಸಂಹಿತೆ ಉಲ್ಲಂಘನೆ: ಸಿಎಂ ವಿರುದ್ಧ ದೂರು
Team Udayavani, Sep 23, 2019, 3:05 AM IST
ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಿಎಂ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ ಹಾಗೂ ಇತರರ ವಿರುದ್ಧ ಕಾಂಗ್ರೆಸ್ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.
ಮಾಜಿ ಸಂಸದ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್. ಉಗ್ರಪ್ಪ ನೇತೃತ್ವದ ನಿಯೋಗ ಭಾನುವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿ, ತಕ್ಷಣ ದಿಂದಲೇ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಸಿಎಂ ಯಡಿಯೂರಪ್ಪ, ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಡ್ವೋಕೇಟ್ ಜನರಲ್ ಅವರೊಂದಿಗೆ ಸರ್ಕಾರಿ ಅತಿಥಿ ಗೃಹದಲ್ಲಿ ಅನರ್ಹ ಶಾಸಕರ ಜತೆಗೆ ಸಭೆ ನಡೆಸಿದ್ದಾರೆ.
ಅಲ್ಲದೇ, ಮುಖ್ಯಮಂತ್ರಿಗಳು ಇತರ ಸಚಿವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾರೊಂದಿಗೆ ವಿಡಿಯೋ ಕಾನ್‌ರೆನ್ಸ್ ನಡೆಸಿ, ಉಪಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿದ್ದಾರೆ. ಈ ರೀತಿ ಆಡಳಿತ ಯಂತ್ರ ದುರುಪಯೋಗಿ ಪಡಿಸಿಕೊಂಡು ಚುನಾವಣೆ ನೀತಿ ಸಂಹಿತೆ ಉಲ್ಲಂ ಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಸಚಿವರು ಹಾಗೂ ಇತರರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.