ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ; ತೇಜಸ್ವಿ , ನಟ ದರ್ಶನ್ಗೆ ದಂಡ
Team Udayavani, Nov 10, 2020, 1:03 AM IST
ಬೆಂಗಳೂರು: ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳ ವಿರುದ್ಧ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸಂಬಂಧ ಸರಕಾರ ಏಕೆ ಕ್ರಮ ವಹಿಸಿಲ್ಲ ಎಂಬ ಹೈಕೋರ್ಟ್ನ ತರಾಟೆಗೆ ಮಣಿದ ಸರಕಾರ, ಕೊನೆಗೂ ನಟ ದರ್ಶನ್ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರಿಗೆ ದಂಡ ವಿಧಿಸಿದೆ.
ಕೊರೊನಾ ಮಾರ್ಗಸೂಚಿ ಜಾರಿಗೊಳಿಸುವ ಸಂಬಂಧದ ಪಿಐಎಲ್ನ ವಿಚಾರಣೆಯನ್ನು ಮುಖ್ಯ ನ್ಯಾ| ಎ.ಎಸ್ ಓಕ್ ನೇತೃತ್ವದ ವಿಭಾ ಗೀಯ ಪೀಠ ಸೋಮವಾರ ನಡೆಸಿತು. ತೇಜಸ್ವಿ ಸೂರ್ಯ ಅವರು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸೆ. 30ರಂದು ನಗರಕ್ಕೆ ವಾಪಸಾಗಿದ್ದರು. ಆಗ ಅವರನ್ನು ಏರ್ಪೋರ್ಟ್ನಿಂದ ತೆರೆದ ವಾಹನ ದಲ್ಲಿ ಪಕ್ಷದ ಕಚೇರಿಗೆ ಕರೆತಂದಿದ್ದು, ಆಗ ಕೋವಿಡ್ ಮಾರ್ಗಸೂಚಿ ಉಲ್ಲಂ ಸಲಾಗಿತ್ತು ಎಂದು ಪ್ರಕರಣ ದಾಖಲಾಗಿತ್ತು. ಈಗ ತೇಜಸ್ವಿ ಸೂರ್ಯ ಅವರಿಗೆ 250 ರೂ. ದಂಡ ವಿಧಿಸ ಲಾಗಿದೆ ಎಂದು ಸರಕಾರ ಕೋರ್ಟಿಗೆ ತಿಳಿಸಿದೆ.
ಉಪ ಚುನಾವಣೆ ಪ್ರಚಾರದ ವೇಳೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸಂಬಂಧ ನಟ ದರ್ಶನ್ ವಿರುದ್ಧ ಎನ್ಸಿಆರ್ ಕೇಸ್ ದಾಖಲಿಸಿ, 250 ರೂ. ದಂಡ ವಿಧಿಸಲಾಗಿದೆ. ಜತೆಗೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸಂಬಂಧ 684 ಮಂದಿಗೆ ದಂಡ ವಿಧಿಸಿದ್ದೇವೆ ಎಂದು ಸರಕಾರ ವರದಿಯಲ್ಲಿ ತಿಳಿಸಿದೆ.
ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪಿಐಎಲ್
ಬೆಂಗಳೂರು, ನ. 9: ಭೂ ಸುಧಾರಣ ಕಾಯ್ದೆಗೆ ತಿದ್ದುಪಡಿ ತಂದು ಎರಡನೇ ಬಾರಿ ಅಧ್ಯಾದೇಶ ಹೊರಡಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸ ಲಾಗಿದೆ. ಅಧ್ಯಾದೇಶ ಪ್ರಶ್ನಿಸಿ ಈ ಹಿಂದೆ ಅರ್ಜಿ ಸಲ್ಲಿಸಿದ್ದ ಮೂಲ ಅರ್ಜಿದಾರ ನಾಗರಾಜ ಹೊಂಗಲ್ ಅವರು, ಎರಡನೇ ಬಾರಿಗೆ ತಿದ್ದುಪಡಿಗೆ ತಂದಿರುವ ಅಧ್ಯಾದೇಶದ ಕ್ರಮವನ್ನು ಪ್ರಶ್ನಿಸಿ¨ªಾರೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ಡಿ.1ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.