ಕುತೂಹಲ ಮೂಡಿಸಿದ ಬಾಲಕೃಷ್ಣ -ಬಿಎಸ್ವೈ ಭೇಟಿ
Team Udayavani, Apr 20, 2017, 3:45 AM IST
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಬಹಿರಂಗವಾಗಿಯೇ ಘೋಷಿಸಿರುವ ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಕುತೂಹಲ ಮೂಡಿಸಿದೆ.
ಆದರೆ, ಸಿದ್ಧಗಂಗಾ ಶ್ರೀಗಳ ಗುರುವಂದನಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಆಹ್ವಾನಿಸಲು ಬಂದಿದ್ದಾಗಿ ಸ್ಪಷ್ಟಪಡಿಸಿರುವ ಎಚ್.ಸಿ.ಬಾಲಕೃಷ್ಣ, ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿದ್ದ ಬಾಲಕೃಷ್ಣ ಕೆಲಕಾಲ ಸಮಾಲೋಚನೆ ಮಾಡಿ ನಿರ್ಗಮಿಸಿದರು. ಸುದ್ದಿಗಾರರ ಜತೆ ಪ್ರತಿಕ್ರಿಯಿಸಿ, ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಗುರುವಂದನಾ ಕಾರ್ಯಕ್ರಮಕ್ಕೆ ಆಹ್ವಾನ ಕೊಡಲು ಬಂದಿದ್ದೆ. ನಾವು ಏಳೂ ಶಾಸಕರು ಒಟ್ಟಾಗಿದ್ದು, ಕಾಂಗ್ರೆಸ್ ತೀರ್ಮಾನದ ಬಗ್ಗೆ ಶೀಘ್ರ ತೀರ್ಮಾನ ಮಾಡ್ತೇವೆ. ದಿಗ್ವಿಜಯ್ ಸಿಂಗ್ ಭೇಟಿ ಮಾಡಿದ ನಮ್ಮ ಸ್ನೇಹಿತರು ಏನು
ಚರ್ಚೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಯಡಿಯೂರಪ್ಪನವರು ಸಹ, ಬಾಲಕೃಷ್ಣ ಅವರು ಸಿದ್ಧಗಂಗಾ ಶ್ರೀಗಳ ಗುರುವಂದನಾ ಕಾರ್ಯ ಕ್ರಮಕ್ಕೆ ಆಹ್ವಾನ ನೀಡಲು ಬಂದಿದ್ದರು. ರಾಜಕೀಯ ವಿಚಾರ ಚರ್ಚೆಯಾಗಿಲ್ಲ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಲಿಂಗಾಯಿತರು
ಯಡಿಯೂರಪ್ಪ ಜತೆಗಿಲ್ಲ ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ಸಿಂಗ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೇರೆ ಪಕ್ಷದ ನಾಯಕರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನಾನ್ಯಾಕೆ ಅವರ ಮಾತಿಗೆ
ಉತ್ತರಿಸಲಿ. ಅವರಿಗೆ ಒಳ್ಳೆಯದಾಗಲಿ ಬಿಡಿ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.