ಸಂಪುಟ ವಿಸ್ತರಣೆ ಮುಂದಕ್ಕೆ
Team Udayavani, Jun 29, 2017, 3:45 AM IST
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ
ಚರ್ಚೆ ನಡೆಯಬಹುದು ಎಂದು ಕಾದು ಕುಳಿತಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆಯಾಗಿದೆ.
ಸಿದ್ದರಾಮಯ್ಯ ಅವರು ಯುಪಿಎ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರ ನಾಮಪತ್ರ ಸಲ್ಲಿಕೆ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರೂ, ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು ಮಾತನಾಡಿಲ್ಲ.
ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ
ಸೋನಿಯಾ ಗಾಂಧಿಗೆ ಆಹ್ವಾನ ನೀಡಿ ಬಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ವಾಪಸ್ ಬಂದ ನಂತರ ಮತ್ತೂಂದು ಬಾರಿ ದೆಹಲಿಗೆ ತೆರಳಿ ಚರ್ಚಿಸಿ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
ತ್ರಿಭಾಷಾ ಸೂತ್ರದನ್ವಯ ಹಿಂದಿ ಅಳವಡಿಕೆ: ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಇದುವರೆಗೂ ಘೋಷಣೆ ಮಾಡಿಲ್ಲ. ಆದರೆ, ತ್ರಿಭಾಷಾ ಸೂತ್ರದನ್ವಯ ನಮ್ಮ ಮೆಟ್ರೊದಲ್ಲಿ ಹಿಂದಿ ಭಾಷೆ ಬಳಸಲಾಗಿದೆ. ಮೆಟ್ರೊ ಯೋಜನೆಗೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರದ ಕೊಡುಗೆಯೇ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.