ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ನ. 29, ಡಿ. 6 ಮತ್ತು 13ರಂದು ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
Team Udayavani, Nov 29, 2020, 6:16 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರ್ಪಡೆ ಮಾಡಲು, ವಿಳಾಸ ಬದಲಾವಣೆ ಸೇರಿದಂತೆ ಇತರ ತಿದ್ದುಪಡಿ ಮಾಡಲು ಬಯಸಿದ್ದೀರಾ? ಹಾಗಿದ್ದರೆ ಚುನಾವಣ ಆಯೋಗ ನೀಡಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
“ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2021’ರ ಅಂಗವಾಗಿ ಮತದಾರರ ಪಟ್ಟಿ ಯಲ್ಲಿ ಹೆಸರು ಸೇರ್ಪಡೆಗೆ ಚುನಾವಣ ಆಯೋಗ ವಿಶೇಷ ಅಭಿಯಾನ ಹಮ್ಮಿ ಕೊಂಡಿದೆ. ನ. 29, ಡಿ. 6 ಮತ್ತು ಡಿ. 13ರಂದು ರಾಜ್ಯವ್ಯಾಪಿ ಅಭಿಯಾನ ನಡೆಯಲಿದ್ದು, ಆಯಾ ದಿನ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಪ್ರತೀ ಮತಗಟ್ಟೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ಅಥವಾ ವಿಳಾಸ ಬದಲಾವಣೆ, ತಿದ್ದುಪಡಿಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
2021ರ ಜ. 1ಕ್ಕೆ 18 ವರ್ಷ ತುಂಬುವ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಗಳನ್ನು ನೋಂದಣಿ ಮಾಡಿಸಿ ಕೊಳ್ಳಬಹುದು. ಇದರ ಜತೆಗೆ ಹೆಸರು, ವಿಳಾಸ ಇನ್ನಿತರ ತಿದ್ದುಪಡಿಗಳಿದ್ದರೆ ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದಕ್ಕೂ ಅವಕಾಶ ಇದೆ.
ಜನರಿಗೆ ಮನವಿ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಭಿಯಾನದ ಸಂಬಂಧ ಈಗಾಗಲೇ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತೀ ಮತಗಟ್ಟೆ ಅಧಿ ಕಾರಿಯ ವ್ಯಾಪ್ತಿಗೆ 300 ಮನೆಗಳು ಬರುತ್ತವೆ. ನಿಗದಿತ ದಿನಾಂಕಗಳ ವಿಶೇಷ ಅಭಿಯಾನದ ಹೊರತಾಗಿ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶದ ಮನೆ ಮನೆ ಭೇಟಿ ಸಹ ನೀಡಲಿದ್ದಾರೆ. ಮತಗಟ್ಟೆ ಅಧಿಕಾರಿಗಳು ಮನೆಗೆ ಬರುತ್ತಾರೆ ಎಂದು ಕಾದು ಕುಳಿತುಕೊಳ್ಳದೆ ಮತಗಟ್ಟೆ ಕಚೇರಿಗೆ ತೆರಳಿ ಹೆಸರು ನೋಂದಣಿ ಮತ್ತು ಇನ್ನಿತರ ಬದಲಾವಣೆ ಮಾಡಿಕೊಳ್ಳುವಂತೆ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಟೋಲ್ ಫ್ರಿ ಸಂಖ್ಯೆ 1950 ಮತ್ತು www.ceokarnataka.kar.nic.in ಸಂಪರ್ಕಿಸಬಹುದು.
ಯುವ ಮತದಾರರು, ವಿಕಲಚೇತನ ಮತದಾರರನ್ನು ಗಮನ ದಲ್ಲಿಟ್ಟುಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ನಡೆಸ ಲಾಗುತ್ತಿದೆ. ಸಾಮಾನ್ಯ ಮತದಾರರು ಕೂಡ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಮತದಾನ ಪ್ರತೀ ಪ್ರಜೆಯ ಸಾಂವಿಧಾನಿಕ ಹಕ್ಕು. ಆ ಹಕ್ಕಿಗೆ ಅರ್ಹರಾಗಲು ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದು ಆವಶ್ಯಕ.
-ಡಾ| ಸಂಜೀವ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.