ಜಯನಗರ ವಿಧಾನಸಭಾ ಚುನಾವಣೆ: ಜಯದ ಮಾಲೆ ಯಾರ ಕೊರಳಿಗೆ
Team Udayavani, Jun 11, 2018, 8:45 AM IST
ಬೆಂಗಳೂರು ; ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಅವರ ಅಕಾಲಿಕ ಮರಣದಿಂದ ಮುಂದೂಡಲ್ಪಟ್ಟ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯ ಮತದಾನ ಪ್ರಕ್ರೀಯೆ ಆರಂಭಗೊಂಡಿದೆ. ಬೆಳಿಗ್ಗೆ 7ರಿಂದ ಪ್ರಾರಂಭಗೊಂಡ ಮತದಾನ ಪ್ರಕ್ರೀಯೆ ಶಾಂತಿಯುತವಾಗಿ ನಡೆಯುತ್ತಿದೆ.
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜಯನಗರದ ರಾಣಿಚೆನ್ನಮ್ಮ ಸ್ಟೇಡಿಯಂನಲ್ಲಿ ಮತದಾನ ಮಾಡಿದ್ದು ಚಿತ್ರರಂಗದ ನಟಿ ಭಾರತಿ ವಿಷ್ಣುವರ್ಧನ್ ಅವರು ಸರತಿ ಸಾಲಿನಲ್ಲಿ ನಿಂತು ಜಯನಗರ ಬೂತ್ ನಂ. 52ರಲ್ಲಿ ಮತದಾನ ಮಾಡಿದ್ದಾರೆ.
ಕ್ಷೇತ್ರದಲ್ಲಿ 1,02,668 ಪುರುಷರು, 1,00,500 ಮಹಿಳೆಯರು ಹಾಗೂ ಇತರರು 16 ಸೇರಿ ಒಟ್ಟು 2,03,184 ಮತದಾರರಿದ್ದಾರೆ. ಮತದಾನಕ್ಕೆ ಕ್ಷೇತ್ರದ ವ್ಯಾಪ್ತಿಗೆ ಬರುವ ಏಳು ವಾರ್ಡ್‌ಗಳಲ್ಲಿ 216 ಮತಗಟ್ಟೆಗಳನ್ನು
ಸ್ಥಾಪಿಸಲಾಗಿದೆ. ಇದರಲ್ಲಿ 5 ಪಿಂಕ್ (ಸಖೀ) ಮತಗಟ್ಟೆಗಳಿವೆ. 50 ಮತಗಟ್ಟೆಗಳಿಗೆ ವೆಬ್‌ಕಾಸ್ಟಿಕಂಗ್ ಸೌಲಭ್ಯ ಒದಗಿಸಲಾಗಿದೆ. 15 ಮತದಾನ ಸ್ಥಳಗಳಲ್ಲಿ ವೀಡಿಯೋಗ್ರμ ವ್ಯವಸ್ಥೆ ಮಾಡಲಾಗುತ್ತಿದೆ. ಸೂಕ್ಷ್ಮ ಮತಗಟ್ಟೆಗಳಿಗೆ 60 ಮಂದಿ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ. ಮತದಾನ ಕಾರ್ಯಕ್ಕೆ 1,400 ಸಿಬ್ಬಂದಿ ನೇಮಕ ಮಾಡಲಾಗಿದೆ.
ಜೊತೆಗೆ 31 ಬಿಎಂಟಿಸಿ ಬಸ್, 7 ಮಿನಿ ಬಸ್, 2 ಟಾಟಾ ಸುಮೋ, 10 ಟೆಂಪೋ ಟ್ರಾವೆಲರ್‌ಗಳನ್ನು ಮತದಾನ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಮತದಾನ ಕೇಂದ್ರಗಳ ಮೇಲ್ವಿಚಾರಣೆಗೆ 29 ಸೆಕ್ಟರ್ ಅಧಿಕಾರಿಗಳನ್ನು
ನೇಮಿಸಲಾಗಿದೆ. ಶಾಂತಿಯುತ ಮತದಾನಕ್ಕೆ ಸ್ಥಳೀಯ ಪೊಲೀಸರಲ್ಲದೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 10 ಕಂಪೆನಿಗಳನ್ನು ನಿಯೋಜಿಸಲಾಗಿದೆ.
ಜಯನಗರ ವಿಧಾನಸಭಾ ಕ್ಷೇತ್ರದ ಮತದಾನ ನಡೆಯುತ್ತಿದ್ದು ತೀವ್ರ ಕುತೂಹಲ ಮೂಡಿಸಿದೆ.
ಶಾಸಕರಾಗಿದ್ದ ಬಿ.ಎನ್.ವಿಜಯಕುಮಾರ್ ನಿಧನದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಿಕೆಯಾಗಿತ್ತು. ಬಿಜೆಪಿಯಿಂದ ವಿಜಯಕುಮಾರ್ ಸಹೋದರ ಬಿ.ಎನ್.ಪ್ರಹ್ಲಾದ್‌ಬಾಬು, ಕಾಂಗ್ರೆಸ್‌ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಕಣದಲ್ಲಿರುವ ಪ್ರಮುಖರು.
ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಸೋಮವಾರ ನಡೆಯಲಿರುವ ಮತದಾನ ಪ್ರಕ್ರಿಯೆ ವೇಳೆ ಪಾರದರ್ಶಕತೆ ಹಾಗೂ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ. ಮತದಾನ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ ಅಲ್ಲದೆ ಭಾನುವಾರ ಮಧ್ಯರಾತ್ರಿಯಿಂದ
ಮದ್ಯ ಮಾರಾಟ ನಿರ್ಬಂಧಿಸಲಾಗಿದೆ. ಯಾವುದೇ ಚುನಾವಣಾ ಅಕ್ರಮ ಅಥವಾ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ನಿಗಾವಹಿಸಲು ಎಂಸಿಸಿಯ ಮತ್ತು ಫ್ಲೆಯಿಂಗ್ ಸ್ಕ್ವಾಡ್, ಕೆಎಸ್‌ಆರ್‌ಪಿ, ಸಿಪಿಎಂಫ್ ತುಕಡಿಗಳ ಜತೆಗೆ ಡಿಸಿಪಿ, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಅಲ್ಲದೆ, ಪ್ರತಿ ಮತಗಟ್ಟೆಯಲ್ಲಿ ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಕಾಂಗ್ರೆಸ್‌ಗೆ ಎಂಇಪಿ ಅಭ್ಯರ್ಥಿ ಬೆಂಬಲ:
ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ಎಂಇಪಿ ಪಕ್ಷದಿಂದ ಸ್ಪರ್ಧಿಸಿರುವ ಸೈಯದ್ ಜಬೀ ಅವರು ತಟಸ್ಥರಾಗಿ
ಉಳಿದು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. ತಾವು ಪ್ರಜ್ಞಾಪೂರ್ವಕವಾಗಿ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಮತದಾನದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮೈತ್ರಿ ಸರ್ಕಾರ ರಚನೆಯಾದ ಬಳಿಕ ಮೊದಲಿಗೆ ಎದುರಾದ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಇದೀಗ ಜಯನಗರ ಕ್ಷೇತ್ರಕ್ಕೆ ಸೋಮವಾರ ಮತದಾನ ನಡೆಯುತ್ತಿದ್ದು, ಜಯ ಯಾರ ಪಾಲಿಗೆ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.