ವಿವಿ ಸಿಂಡಿಕೇಟ್ ನೇಮಕ
Team Udayavani, Jul 14, 2018, 11:08 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದುವರಿದಿದ್ದು, ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರನ್ನು ಬದಲಾವಣೆ ಮಾಡದಂತೆ ಕೋರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿಗಳಿಗೆ ಶುಕ್ರವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಿಗೆ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಪರಿಣಿತರಾದ ಎಲ್ಲ ವರ್ಗದವರನ್ನು ಸಿಂಡಿಕೇಟ್ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಎಲ್ಲ ಸದಸ್ಯರನ್ನು ಬದಲಾವಣೆ ಮಾಡದೆ ಮುಂದುವರಿಸುವಂತೆ ಕೋರಿದ್ದಾರೆ.
ಸರ್ಕಾರ ಬದಲಾದ ಮೇಲೆ ವಿವಿಗಳ ಸಿಂಡಿಕೇಟ್ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರನ್ನು ಬದಲಾಯಿಸುವುದು ಸಂಪ್ರದಾಯ. ಆಡಳಿತ ಪಕ್ಷದವರು ತಮಗೆ ಬೇಕಾದ ಆಯಾ ಕ್ಷೇತ್ರದ ಪರಿಣಿತರನ್ನು ಈ ಹುದ್ದೆಗಳಿಗೆ ನೇಮಕ ಮಾಡುತ್ತದೆ.
ಅದರಂತೆ ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಜಿ.ಟಿ.ದೇವೇಗೌಡ ಅವರು ಸಿಂಡಿಕೇಟ್ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರನ್ನು ಬದಲಾಯಿಸಲು ನಿರ್ಧರಿಸಿದ್ದು, ಈಗಾಗಲೇ ಈ ಕುರಿತು ಚರ್ಚೆ ಆರಂಭಿಸಿದ್ದಾರೆ. ಇದು ಗಮನಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಬದಲಾವಣೆ ಮಾಡದಂತೆ ಕೋರಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ
Monkey disease: ಉಣುಗುಗಳಲ್ಲಿ ಮಂಗನ ಕಾಯಿಲೆ ವಂಶವಾಹಿ ಪ್ರಸರಣ!
Hunsur: ರಾಯರ ದರ್ಶನಕ್ಕೆ ತೆರಳುತ್ತಿದ್ದವರ ವಾಹನ ಅಪಘಾತ… ಚಾಲಕ ಸೇರಿ ಏಳು ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bandipur ಹೆದ್ದಾರಿಯಲ್ಲಿ ಚೆಲ್ಲಿದ ಅಕ್ಕಿ ಮೆಲ್ಲುತ್ತ ನಿಂತ ಕಾಡಾನೆಗಳು: ಟ್ರಾಫಿಕ್ ಜಾಮ್
Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು
Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ
Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ