7th Pay Commission: ಸರಕಾರಕ್ಕೆ ಅಭಿನಂದನೆ; ಆಗಸ್ಟ್ 1ರಿಂದಲೇ ಶಿಫಾರಸುಗಳು ಜಾರಿಗೆ
ಲಕ್ಷಾಂತರ ನೌಕರರ ವೇತನ ಹೆಚ್ಚಳ: ಷಡಾಕ್ಷರಿ
Team Udayavani, Jul 17, 2024, 6:30 AM IST
ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನವನ್ನು ಶೇ.27.50ರಷ್ಟು ಹೆಚ್ಚಳ ಮಾಡಿದ ರಾಜ್ಯ ಸರಕಾರದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸ್ವಾಗತಿಸಿದ್ದಾರೆ.
7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಪ್ರಸಕ್ತ ವರ್ಷದ ಆಗಸ್ಟ್ 1ರಿಂದಲೇ ಶಿಫಾರಸುಗಳು ಜಾರಿಗೆ ಬರಲಿವೆ. ಇದರಿಂದ ಲಕ್ಷಾಂತರ ನೌಕರರ ವೇತನವು ಶೇ.27.5ರಷ್ಟು ಏರಿಕೆಯಾಗಲಿದೆ.
ವೇತನ ಹೆಚ್ಚಳದ ನಿರ್ಧಾರವನ್ನು ಸ್ವಾಗತಿಸಿರುವ ಅವರು, ಹಳೆ ಪಿಂಚಣಿ ಯೋಜನೆ (ಒಪಿಎಸ್), ಆರೋಗ್ಯ ಯೋಜನೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.
ವೆೇತನ ಪರಿಷ್ಕರಣೆ ಮಾಡಿದ್ದಕ್ಕೆ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸರಕಾರಿ ನೌಕರರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರಕಾರ ಅನುಮೋದನೆ ನೀಡಿರುವುದು ಸಮಾಧಾನಕರ ಸಂಗತಿಯಾಗಿದೆ. ಇದಕ್ಕಾಗಿ ನೌಕರರ ಸಂಘ ಸೇರಿ ಎಲ್ಲ ಸಂಘಗಳು ಹಾಗೂ ನೌಕರರ ಪರವಾಗಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಜುಲೈ 23ರಂದು ಪ್ರಮುಖ ಸಭೆ
7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಇತರ ಬೇಡಿಕೆಗಳ ಈಡೇರಿಕೆಗಾಗಿ ನೌಕರರ ಸಂಘವು ಜುಲೈ 23ರಂದು ಪ್ರಮುಖ ಸಭೆ ನಡೆಸಲು ತೀರ್ಮಾನಿಸಿದೆ.
ಹಳೇ ಪಿಂಚಣಿ ಯೋಜನೆ, ನೌಕರರಿಗೆ ಆರೋಗ್ಯ ಯೋಜನೆ ಸೇರಿ ಹಲವು ಬೇಡಿಕೆಗಳ ಈಡೇರಿಕೆ ಬಾಕಿ ಇದೆ. ಇಷ್ಟೆಲ್ಲ ವಿಚಾರಗಳ ಕುರಿತು ಚರ್ಚಿಸಲು ರಾಜ್ಯದ ಸರಕಾರಿ ನೌಕರರ ಸಂಘಗಳ ಎಲ್ಲ ವೃಂದಗಳು, ರಾಜ್ಯ ಕೇಡರ್ ಅಸೋಸಿಯೇಶನ್ ಹಾಗೂ ಎಕ್ಸಿಕ್ಯೂಟಿವ್ ಸಭೆಯನ್ನು ಜುಲೈ 23ರಂದು ಕರೆಯಲಾಗಿದೆ. ಸಭೆಯಲ್ಲಿ ಎಲ್ಲ ವಿಷಯಗಳ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿ.ಎಸ್ ಷಡಾಕ್ಷರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.