ಅಜಯ್ ದೇವಗನ್ ವಾಕರೂ ಬ್ರ್ಯಾಂಡ್ ರಾಯಭಾರಿ
Team Udayavani, Oct 27, 2022, 10:30 PM IST
ಬೆಂಗಳೂರು: ಭಾರತದಲ್ಲಿ ಪಾದರಕ್ಷೆಗಳ ಮುಂಚೂಣಿಯ ಬ್ರ್ಯಾಂಡ್ ಆಗಿರುವ ವಾಕರೂಗೆ ಬಾಲಿವುಡ್ ನಟ ಅಜಯ್ ದೇವಗನ್ ಅವರನ್ನು ಗುರು ವಾರ ಬ್ರ್ಯಾಂಡ್‌ನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ವಾಕರೂ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿಕೆಸಿ ನೌಶಾದ್ ತಿಳಿಸಿದರು.
ನಟ ಅಜಯ್ ದೇವಗನ್ ನಮ್ಮ ಹೊಸ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಸಂತಸದ ಸಂಗತಿ. ಅವರು ಬ್ರ್ಯಾಂಡ್‌ನೊಂದಿಗೆ ಮೌಲ್ಯಗಳಲ್ಲಿ ಬಹಳಷ್ಟು ಹೊಂದಾಣಿಕೆ ಹೊಂದಿದ್ದಾರೆ. ಉನ್ನತ ಮಟ್ಟದ ಜನಪ್ರಿಯತೆ ಮತ್ತು ವಿಶ್ವಾಸಾರ್ಹತೆ ಹೊಂದಿರುತ್ತಾರೆ. ಈ ಸಹಯೋಗ ಎಲ್ಲಾ ವರ್ಗಗಳಲ್ಲಿನ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಲು ನೆರವು ನೀಡಲಿದೆ. ಉತ್ತರ ಮತ್ತು ಪಶ್ಚಿಮ ಮಾರುಕಟ್ಟೆಗಳ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಬ್ರ್ಯಾಂಡ್ ಅನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಂಬಿಕೆಯಿದೆ ಎಂದರು.
ಹವಸ್ ಕ್ರಿಯೇಟಿವ್ ಗ್ರೂಪ್ ಇಂಡಿಯಾದ ಪರಿಕಲ್ಪನೆ ಮತ್ತು ಕಾರ್ಯಗತಗೊಳಿಸಲಾಗಿರುವ ಪ್ರಚಾರಾಭಿಯಾನ ಮೂರು ಚಲನಚಿತ್ರಗಳನ್ನು ಒಳಗೊಂಡಿದ್ದು, ಇದರಲ್ಲಿ ಅಜಯ್ ದೇವಗನ್, ವಾಕರೂ ಬಗ್ಗೆ ಮೂರು ವಿಭಿನ್ನ ಕಲ್ಪಿತ ತಾಣಗಳಲ್ಲಿ ಬ್ರ್ಯಾಂಡ್ ಸಂದೇಶ ನೀಡುತ್ತಾರೆ. ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ ಹಬ್ಬದ ಸಾಲಿಗೆ 200ಕ್ಕೂ ಹೆಚ್ಚಿನ ವಿನ್ಯಾಸಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹವಸ್ ಗ್ರೂಪ್ ಇಂಡಿಯಾದ ಅಧ್ಯಕ್ಷ ಮತ್ತು ಸೃಜನಶೀಲತೆ ಕಚೇರಿ ಮುಖ್ಯಸ್ಥ ಬಾಬಿ ಪವಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.