Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
ವಕ್ಫ್ ನೋಟಿಸ್ ಕುರಿತು ಸಂತ್ರಸ್ತ ರೈತರೊಂದಿಗೆ ಚರ್ಚೆ: ಸಂಸದ ತೇಜಸ್ವಿ ಸೂರ್ಯ ಮಾಹಿತಿ
Team Udayavani, Nov 5, 2024, 6:03 PM IST
ಬೆಂಗಳೂರು: ರಾಜ್ಯದ ಹಲವೆಡೆ ವಕ್ಫ್ ನೋಟಿಸ್ ಸೃಷ್ಟಿಸಿರುವ ಆತಂಕದ ವಿಚಾರವೀಗ ಕೇಂದ್ರ ಸರಕಾರಕ್ಕೂ ತಲುಪಿದ್ದು, ವಕ್ಫ್(ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ನ. 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ವಕ್ಫ್ ಭೂ ವಿವಾದ ಸಂಬಂಧ ವಿಜಯಪುರ ಜಿಲ್ಲೆಯ ರೈತರ ಭೇಟಿಯಾಗಿ ಚರ್ಚಿಸುವಂತೆ, ಜಂಟಿ ಸಂಸದೀಯ ಸಮಿತಿ ಸದಸ್ಯರೂ ಆದ ತೇಜಸ್ವಿ ಸೂರ್ಯ ಜಗದಾಂಬಿಕಾ ಪಾಲ್ ರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ. ವಕ್ಫ್ ಅತಿಕ್ರಮಣದಿಂದ ಸಂತ್ರಸ್ತರಾದ ರೈತರೊಂದಿಗೆ ಸಂವಾದ ನಡೆಸಲು ನ. 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುವಂತೆ ನಾನು ಮಾಡಿದ್ದ ಮನವಿಗೆ ಜೆಪಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ್ದಾರೆ ಎಂದರು.
ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರೈತ ಸಂಘಟನೆಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಠಾಧೀಶರು ಮತ್ತು ಇತರರು ನೀಡಿದ ಮನವಿಗಳನ್ನು ಜೆಪಿಸಿ ಮುಂದೆ ಇಡಲಾಗುವುದು”. ರೈತರು ಸುಮಾರು ಒಂದು ಶತಮಾನದಿಂದ ತಮ್ಮ ಜಮೀನುಗಳನ್ನು ಸಾಗುವಳಿ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ, ಅವರಲ್ಲಿ ಹಲವರಿಗೆ ಯಾವುದೇ ದಾಖಲೆ ಅಥವಾ ವಿವರಣೆಯಿಲ್ಲದೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ನೋಟಿಸ್ ನೀಡಲಾಗಿದೆ ಎಂದು ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ದೂರಿದ್ದಾರೆ.
Chairman of JPC on Waqf has kindly consented to my request to visit Hubli and Bijapur on 7th November to interact with farmers affected by the Waqf’s predatory action.
Chairman will interact with farmer organisations, Mutts and petitions given to him will be placed before JPC.
— Tejasvi Surya (@Tejasvi_Surya) November 5, 2024
ವಕ್ಫ್ ಅತಿಕ್ರಮಣ ಮಾಡಿದ ಆಸ್ತಿಯ ಪ್ರಮಾಣವು ಗಣನೀಯವಾಗಿದೆ. ಸುಮಾರು 1,500 ಎಕರೆ ಆಸ್ತಿಯನ್ನು ಅವರ ಹಳ್ಳಿಯಲ್ಲಿಯೇ ವಕ್ಫ್ ಆಸ್ತಿ ಎಂದು ಗೊತ್ತುಪಡಿಸಲಾಗಿದೆ” ಎಂದು ಪಾಲ್‌ಗೆ ಬರೆದ ಪತ್ರದಲ್ಲಿ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.