ಕೊಯ್ನಾ ಡ್ಯಾಂನಿಂದ ನೀರು ಬಿಡಿಸಿ

Team Udayavani, Jun 8, 2019, 3:00 AM IST

Udayavani Kannada Newspaper

ಬೆಂಗಳೂರು: ಮಳೆ ಕೈಕೊಟ್ಟಿದ್ದರಿಂದ ಅಥಣಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಅಥಣಿ ತಾಲೂಕಿನ ಕೃಷ್ಣಾ ನದಿ ಹೋರಾಟ ಸಮಿತಿ ಸದಸ್ಯರ ನಿಯೋಗವು ಶಾಸಕ ಮಹೇಶ್‌ ಕಮಠಳ್ಳಿ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಈ ಸಂಬಂಧ ಶುಕ್ರವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗ, ಕಳೆದೆರಡು ತಿಂಗಳಿನಿಂದ ಉತ್ತರ ಕರ್ನಾಟಕದ ಜಲಮೂಲ ಕೃಷ್ಣಾ ನದಿ ಬತ್ತಿದೆ. ಇದರಿಂದ ವಿಜಯಪುರ, ಬಾಗಲಕೋಟೆಯ 800 ಗ್ರಾಮಗಳು, ನಗರ ಮತ್ತು ಪಟ್ಟಣಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ.

ಹಗಲು-ರಾತ್ರಿ ಎನ್ನದೆ ಮಹಿಳೆ, ಮಕ್ಕಳು, ವೃದ್ಧರು ಟ್ಯಾಂಕರ್‌ ನೀರಿಗೆ ಚಾತಕ ಪಕ್ಷಿಯಂತೆ ಕಾಯುವ ಸ್ಥಿತಿ ಉಂಟಾಗಿದೆ. ಕೊಳವೆಬಾವಿಗಳು ಬತ್ತಿದ್ದರಿಂದ ಟ್ಯಾಂಕರ್‌ ನೀರು ಕೂಡ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣ ಕೊಯ್ನಾ ಜಲಾಶಯದಿಂದ ಕೃಷ್ಣಾಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿತು.

ಪ್ರತಿ ವರ್ಷ ಜನವರಿಯಿಂದ ಜೂನ್‌ ಅಂತ್ಯದವರೆಗೆ ಹಂತ-ಹಂತವಾಗಿ ಮಹಾರಾಷ್ಟ್ರದ ಕೊಯ್ನಾ ಹಾಗೂ ವಿವಿಧ ಜಲಾಶಯಗಳಿಂದ 4 ಟಿಎಂಸಿ ನೀರು ಬಿಡಿಸುವ ಸಂಬಂಧ ಜಲ ಸಂಪನ್ಮೂಲ ಇಲಾಖೆ ಮೂಲಕ ಮಹಾರಾಷ್ಟ್ರ ಸರ್ಕಾರದೊಂದಿಗೆ ಲಿಖೀತ ಒಪ್ಪಂದ ಮಾಡಿಕೊಳ್ಳಬೇಕು. ಕೃಷ್ಣಾ ನದಿಯಲ್ಲಿ ಚಿಕ್ಕ ತಡೆಗೋಡೆಗಳನ್ನು ನಿರ್ಮಿಸಿ, ಬೇಸಿಗೆ ಅವಧಿಯಲ್ಲಿ ನದಿಯಲ್ಲಿ ನೀರು ನಿಲ್ಲುವಂತೆ ಮಾಡುವ ಮೂಲಕ ತಾತ್ಕಾಲಿಕ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿತು.

ಅಥಣಿ ತಾಲೂಕಿನ ಬರಪೀಡಿತ 30ಕ್ಕೂ ಹೆಚ್ಚು ಗ್ರಾಮಗಳಿಗೆ ಏಕೈಕ ಜಲಮೂಲ ಅಗ್ರಹಾರಿಣಿ. ಇದಕ್ಕೆ ಮಹಾರಾಷ್ಟ್ರದ ಮಹಿಶಾಳಾ, ತಾಕಾರಿ, ಕೆನಾಲ್‌ ಮೂಲಕ ನೀರು ಹರಿಸಿದಲ್ಲಿ ಆ ಭಾಗಕ್ಕೆ ಶಾಶ್ವತ ಪರಿಹಾರ ದೊರೆತಂತಾಗಲಿದೆ. ಹೀಗಾಗಿ ನೀರು ಬಿಡಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಆಗ್ರಹಿಸಿತು. ನಂತರ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೂ ಸಮಿತಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ವಿಜಯಕುಮಾರ್‌, ಪ್ರಕಾಶ್‌ ಕಾಂಬ್ಳೆ, ಎಸ್‌.ಎಚ್‌. ಪೂಜಾರಿ ಇದ್ದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.