Wayanadu Landslide: ಪರಿಹಾರ ಕಾರ್ಯ ಸಮನ್ವಯಕ್ಕೆ ರಾಜ್ಯದಿಂದ ಇಬ್ಬರು ಐಎಎಸ್‌ಗಳ ನೇಮಕ
ನಾಗರಿಕರ ನೆರವಿಗಾಗಿ ಚಾಮರಾಜನಗರ ಜಿಲ್ಲಾಡಳಿತದಿಂದ ಸಹಾಯವಾಣಿ ಶುರು, ರಕ್ಷಣಾ ಕಾರ್ಯಾಚರಣೆಗೆ ಎಲ್ಲ ಸಹಕಾರ : ಸಿಎಂ ಸಿದ್ದರಾಮಯ್ಯ
Team Udayavani, Jul 30, 2024, 10:08 PM IST
ಹೊಸದಿಲ್ಲಿ: ಕೇರಳದ ವಯನಾಡಿನಲ್ಲಿ ಮಂಗಳವಾರ ಸಂಭವಿಸಿರುವ ಭಾರಿ ಭೂಕುಸಿತದಿಂದ ಬಹಳಷ್ಟು ಸಾವು ನೋವಾಗಿದೆ. ವಯನಾಡು ರಾಜ್ಯದ ನೆರೆಯ ಜಿಲ್ಲೆಯಾದ ಹಿನ್ನೆಲೆಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಮನ್ವಯಕ್ಕಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಾದ ಸಿ. ಜಾಫರ್ (ಮೊಬೈಲ್ ಸಂಖ್ಯೆ 9448355577) ಹಾಗೂ ದಿಲೀಶ್ ಶಶಿ (9446000514)ರನ್ನು ರಾಜ್ಯ ಸರ್ಕಾರ ನಿಯೋಜಿಸಿದೆ.
ರಾಜ್ಯದ ಗಡಿಜಿಲ್ಲೆಯೂ ಆಗಿರುವ ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಪರಸ್ಪರ ನೆರವಿಗೆ ನಿಲ್ಲಬೇಕಿದ್ದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇನೆ. ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಮಾನವೀಯ ನೆಲೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.
ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು… pic.twitter.com/OD4LtCLqeB
— CM of Karnataka (@CMofKarnataka) July 30, 2024
ಎನ್ ಡಿ ಆರ್ ಎಫ್, ಸೇನಾ ಪಡೆಯ ತಂಡ ರವಾನೆ:
ಸಂತ್ರಸ್ತರ ಪ್ರಾಣ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳ ತ್ವರಿತವಾಗಿ ರವಾನಿಸಲಾಗಿದೆ. ಈ ತಂಡಗಳ ಜೊತೆಗೆ ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳ ರವಾನೆ ಮಾಡಲು ನೆರವು ನೀಡಲಾಗಿದೆ.
ರಕ್ಷಣಾ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್ ಕಾರಿಡಾರ್ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಒದಗಿಸಲಿದೆ.
ಕೇರಳ ಸರ್ಕಾರದ ವಿಪತ್ತು ನಿರ್ವಹಣೆಯ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳ ಕರೆತರಲು ಬಸ್ ಗಳ ಎಚ್.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಗರಿಷ್ಠ ಪ್ರಯತ್ನವನ್ನು ಮಾಡಲಾಗುತ್ತಿದೆ.
ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:
08226 223163
08226 223161
08226 223160
ವಾಟ್ಸಾಪ್ ಸಂಖ್ಯೆ: 9740942901
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.