ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್


Team Udayavani, Jun 25, 2021, 4:55 PM IST

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಬೆಂಗಳೂರು:ಗುಂಪುಗಾರಿಕೆ ಮಾಡಿ ಪಕ್ಷವನ್ನು ಹಾಳು ಮಾಡುವವರು ನಮಗೆ ಬೇಡವೇ ಬೇಡ. ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರನ್ನು ಮಾತ್ರ ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಹಾಸನ ಜಿಲ್ಲೆ ಬೇಲೂರು ಪುರಸಭೆಗೆ ಆಯ್ಕೆ ಆಗಿರುವ ಕಾಂಗ್ರೆಸ್ ಸದಸ್ಯರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಭಿನಂದಿಸಿದ ಹಾಗೂ ಹಾಸನ ಜಿಲ್ಲೆಯ ಅನ್ಯಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ದೇವಾಲಯವಿದ್ದಂತೆ. ದೇವಾಲಯಕ್ಕೆ ನಾವು ಹೋಗಿ ಪೂಜೆ ಮಾಡುವುದು ಯಾಕೆ? ನಮಗೆ ನೆಮ್ಮದಿ ಸಿಗಲಿ, ಕಷ್ಟ ನಿವಾರಣೆಯಾಗಿ ಶ್ರೇಯಸ್ಸು ಸಿಗಲಿ ಅಂತಾ. ಭಕ್ತ ಹಾಗೂ ಭಗವಂತನಿಗೂ ಇರುವ ನಂಟಿನ ಸ್ಥಳ ದೇವಾಲಯ. ಯಾವುದೇ ಧರ್ಮವಾಗಿರಲಿ ದೇವರ ಮುಂದೆ ಪ್ರಾರ್ಥನೆ ಮಾಡುತ್ತೇವೆ.  ಅದೇ ಕಾರಣಕ್ಕೆ ನಾನು ದೇವಾಲಯದಂತಿರುವ ನಮ್ಮ ಕಾಂಗ್ರೆಸ್ ಕಚೇರಿಯನ್ನು ಸ್ವಲ್ಪ ಬದಲಾವಣೆ ಮಾಡಿದ್ದೇನೆ. ಹಿಂದೆ ರುದ್ರೇಶ್ ಅವರು ಚುನಾವಣೆಯಲ್ಲಿ ಗೆದ್ದಿದ್ದರು. ಆದರೆ ಅವರು ಈಗ ನಮ್ಮ ಜತೆ ಇಲ್ಲ. ನಾವೇ ಹೆಣ್ಣುಮಗಳಿಗೆ ಒತ್ತಾಯ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದ್ದೆವು. ಆದರೆ ಅವರು ಹೋರಾಡಿ ಸೋತಿದ್ದಾರೆ. ಅದಕ್ಕೆ ನಾವು ಸೇರಿದಂತೆ ನಾನಾ ಕಾರಣಗಳಿರಬಹುದು. ಮುಂದೆ ನಾವು ಕಾರ್ಯಕರ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್

ಎಷ್ಟು ಜನ ನನ್ನ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಸದ್ಯಕ್ಕೆ ನಾನು ಹೇಳುವುದಿಲ್ಲ. ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಬಿಜೆಪಿ ಶಾಸಕರಿಗೆ ಹಾಗೂ ಮಂತ್ರಿಗಳಿಗೆ ಮನವರಿಕೆಯಾಗಿದೆ. ಈ ಸಮಯದಲ್ಲಿ ಪಕ್ಷ ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತಂದು ಜನರಿಗೆ ಅನುಕೂಲ ಮಾಡಿಕೊಡಬೇಕು. ಜನರ ಹೃದಯ ಗೆಲ್ಲಲು ಬಿಜೆಪಿಯವರಿಗೆ ಎಂತಹ ಅವಕಾಶ ಸಿಕ್ಕಿತ್ತು. ಆದರೆ ಅವರು ಜನರ ಹೃದಯ ಗೆಲ್ಲಲಿಲ್ಲ. ಬದಲಿಗೆ ಜನರಿಗೆ ಬೂದಿ ಕೊಟ್ಟರು. ಆಸ್ಪತ್ರೆ ಬಿಲ್ ಕೊಡಲು ಶಕ್ತಿ ಇಲ್ಲದವರನ್ನು ಸ್ಮಶಾನಕ್ಕೆ ಕಳುಹಿಸಿದರು ಎಂದು ಡಿಕೆಶಿ ಟೀಕಿಸಿದರು.

ನಿಮ್ಮ ತಾಲೂಕಿನಲ್ಲಿ ಎಷ್ಟು ಜನ ಸತ್ತಿದ್ದಾರೆ, ಎಷ್ಟು ಜನ ಕೊರೋನಾದಿಂದ ನರಳುತ್ತಿದ್ದಾರೆ. ಎಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ, ಯಾರ ಪರಿಸ್ಥಿತಿ ಏನು ಎಂದು ನೀವು ತಂಡ ಮಾಡಿಕೊಂಡು ಮನೆ, ಮನೆಗೆ ಹೋಗಿ ವಾಸ್ತವಾಂಶ ತಿಳಿದುಕೊಂಡು ಧೈರ್ಯ ತುಂಬಬೇಕು. ಕೋವಿಡ್ ದಿಂದ ತಮ್ಮವರನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಬೇಕು. ನಾವು ಸರ್ಕಾರಕ್ಕೆ ಒತ್ತಾಯ ಮಾಡಿ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮಾಡಿದ್ದೇವೆ. ಜನರಿಗೆ ಆನ್ ಲೈನ್ ನೋಂದಣಿ ಗೊತ್ತಿಲ್ಲ. ಹೀಗಾಗಿ ಜನರ ನೋಂದಣಿಯನ್ನು ನೀವೇ ಮಾಡಿಸಬೇಕು. ಕೋವಿಡ್ ನಿಂದ ಸತ್ತವರಿಗೂ ಪರಿಹಾರ ಸಿಗುವಂತೆ ಮಾಡಬೇಕು ಎಂದು ಸದಸ್ಯರಿಗೆ ಹೇಳಿದರು.

ಪಕ್ಷದ ಸಿದ್ದಾಂತ ಹಾಗೂ ನಾಯಕತ್ವ ನಂಬಿ ಬರುವವರ ಪಟ್ಟಿಯನ್ನು ನೀವೆಲ್ಲಾ ಸೇರಿ ಕೊಡಿ. ಅದಕ್ಕಾಗಿ ಸಮಿತಿ ಇದೆ, ಅದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡುವವರು, ಪಕ್ಷ ಹಾಳು ಮಾಡುವವರು ನಮಗೆ ಬೇಡ. ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡುವವರನ್ನು ಮಾತ್ರ ಸೇರಿಸಿಕೊಳ್ಳಿ. ಪದಾಧಿಕಾರಿಗಳ ಪೈಕಿ ಯಾರು ಕಾರ್ಯಪ್ರವೃತ್ತವಾಗಿಲ್ಲವೋ ಅವರನ್ನು ಬದಲಾಯಿಸುತ್ತೇವೆ. ಪ್ರತಿ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚಿಸಿ ವಿದ್ಯಾರ್ಥಿಗಳು, ಮಹಿಳೆಯರು, ಯುವಕರು, ಹಿಂದುಳಿದವರು ಎಲ್ಲರಿಗೂ ಪ್ರಾತಿನಿಧ್ಯ ನೀಡಬೇಕು. ಹೀಗಾಗಿ ಎಲ್ಲ ಘಟಕಗಳ ಸಮಿತಿ ಮಾಡಬೇಕಾಗುತ್ತದೆ ಎಂದರು.

ನಿಮ್ಮಲ್ಲಿ ಯಾವುದೇ ಕಾರಣಕ್ಕೂ ಗೊಂದಲ ಆಗಬಾರದು. ನೀವ್ಯಾರೂ ಅದಕ್ಕೆ ಅವಕಾಶ ಕೊಡಬಾರದು. ನಾವು ಒಂದು ಹಂತದವರೆಗೂ ನೋಡುತ್ತೇವೆ. ಇಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಫಾಲೋವರ್ ಆಗಬೇಕು. ರಾಹುಲ್ ಗಾಂಧಿ ಅವರು ಹೇಳಿದ ಮಾತಿನಂತೆ ಕಾಂಗ್ರೆಸ್ ಧ್ವಜವೇ ನಮ್ಮ ಧರ್ಮ ಎಂಬುದು ನಿಮ್ಮ ತಲೆಯಲ್ಲಿ ಇರಲಿ. ಗಾಂಧಿ ಕುಟುಂಬದಲ್ಲಿ ಮಾತ್ರ ಇಂತಹ ದೊಡ್ಡ ಹಾಗೂ ತ್ಯಾಗದ ತೀರ್ಮಾನ ಬರಲು ಸಾಧ್ಯ. ಆ ಪಕ್ಷ ಹಾಗೂ ನಾಯಕತ್ವದಲ್ಲಿ ಕೆಲಸ ಮಾಡುವಾಗ ನಾವು ಅದನ್ನೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.