ಜೀವದ ಜತೆ ಚೆಲ್ಲಾಟವಾಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ಮರು ಆಲೋಚನೆ ಮಾಡಬೇಕಿದೆ: ಎಚ್ ಡಿಕೆ
Team Udayavani, Nov 27, 2021, 12:17 PM IST
ಬೆಂಗಳೂರು: ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾವುಗಳು ನೀಟ್ ಪರೀಕ್ಷೆಯ ಬಗ್ಗೆ ಮರು ಆಲೋಚನೆ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ:ಎಚ್ಚರ…ನಿರ್ಲಕ್ಷ್ಯ ಬೇಡ; ಏನಿದು ಒಮಿಕ್ರಾನ್ ರೂಪಾಂತರಿ?ಕೋವಿಡ್ ನ ಹೊಸ ತಳಿ
ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು. ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು ಎಂದು ಎಚ್ ಡಿಕೆ ಮನವಿ ಮಾಡಿದ್ದಾರೆ.
ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.