ರಜನಿ ‘ಕಾಲ’ ರಾಜ್ಯದಲ್ಲಿ ಬಿಡುಗಡೆಯಾದರೆ ಉಗ್ರ ಹೋರಾಟ : ವಾಟಾಳ್
Team Udayavani, May 26, 2018, 3:03 PM IST
ಮೈಸೂರು: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಕಾಲ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ಅವರು ರಜನಿ ಕಾಂತ್ ಅವರು ಕನ್ನಡ ದ್ರೋಹಿ. ಹೀಗಾಗಿ ಅವರ ಚಿತ್ರಕ್ಕೆ ಕರ್ನಾಟಕದಲ್ಲಿ ಅವಕಾಶ ನೀಡಬಾರದು. ಚಿತ್ರ ಬಿಡುಗಡೆಯಾದಲ್ಲಿ ಕನ್ನಡಪರ ಸಂಘಟನೆಗಳು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಜನಿಕಾಂತ್ ಅವರು ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀಡಬೇಕು ಎಂದಿದ್ದರು. ಈ ಹೇಳಿಕೆ ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು.
ರಜನಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಜೂನ್ 7 ರಂದು ವಿಶ್ವಾದ್ಯಂತ ಬಿಡುಗಡೆ ಯಾಗಲಿದೆ. ಚಿತ್ರದಲ್ಲಿ ಹುಮಾ ಖುರೇಷಿ , ಈಶ್ವರಿ ರಾವ್, ಧನುಷ್ ಅವರು ಮುಖ್ಯ ಭೂಮಿಕೆಯಲ್ಲಿದ್ದಾರೆ.
ಬಿಜೆಪಿ ಬಂದ್‌ಗೆ ಬೆಂಬಲ ಇಲ್ಲ
ಸಮ್ಮಿಶ್ರ ಸರ್ಕಾರ ರೈತ ಸಾಲ ಮನ್ನಾ ಘೋಷಿಸದಿದ್ದುದಕೆ ಬಿಜೆಪಿ ಕರೆ ನೀಡಿರುವ ರಾಜ್ಯ ಬಂದ್ ಕುರಿತು ಪ್ರತಿಕ್ರಿಯಿಸಿ ಯಾವ ಕಾರಣಕ್ಕಾಗಿ ಬಿಜೆಪಿ ಬಂದ್‌ಗೆ ಕರೆ ನೀಡಿದೆ. ನಾವು ಬಂದ್‌ಗೆ ಕರೆ ನೀಡಿದಾಗ ಬೆಂಬಲ ನೀಡಿರಲಿಲ್ಲ . ಹಾಗಾಗಿ ನಾವು ಬಂದ್‌ಗೆ ಬೆಂಬಲ ನೀಡಿರುವ ಪ್ರಶ್ನೆಯೇ ಇಲ್ಲ ಎಂದರು.
ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡಿದಿರಿ, ಏನೆಲ್ಲಾ ಜರಿದಿರಿ ಆದರೆ ನಾವು ಯಡಿಯೂರಪ್ಪ ಅವರ ವಿರುದ್ಧ ಆ ರೀತಿ ಮಾಡುವುದಿಲ್ಲ. ಯಡಿಯೂರಪ್ಪ ಅವರು ಮಹದಾಯಿ ಹೋರಾಟಕ್ಕೆ ಬೆಂಬಲ ನೀಡಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.