BJP-JDS;28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಎಚ್ ಡಿಕೆ,ವಿಜಯೇಂದ್ರ ಮಾತುಕತೆ

ಬಿಡದಿಯ ತೋಟದ ಮನೆಯಲ್ಲಿ ಭೇಟಿ... ಮೈತ್ರಿ, ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಮಹತ್ವದ ಚರ್ಚೆ

Team Udayavani, Nov 26, 2023, 6:01 PM IST

1-sasadas

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಇಬ್ಬರೂ ನಾಯಕರು ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿ ಅವರು ಮಾತನಾಡಿ, ”ದೇಶದ ಹಿತದೃಷ್ಟಿಯಿಂದ ಮುಂದಿನ ಅವಧಿಗೂ ನರೇಂದ್ರ ‌ಮೋದಿಯವರೇ ಪ್ರಧಾನಿ ಆಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಕ್ಷೇತ್ರ ಹಂಚಿಕೆ ಕುರಿತು ‌ಹೈಕಮಾಂಡ್ ನಲ್ಲಿ ‌ಚರ್ಚಿಸುತ್ತಾರೆ. ರಾಜ್ಯದಲ್ಲಿ ನಮ್ಮ ಮೈತ್ರಿಕೂಟ 28ಕ್ಕೆ‌ 28 ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಲಿದ್ದೇವೆ” ಎಂದರು.

”2006ರಲ್ಲಿ ಮೈತ್ರಿ ಸರಕಾರದ ಕಾಲದಲ್ಲಿ ಯಡಿಯೂರಪ್ಪ ‌ಹಾಗೂ ನಾನು ಜತೆಯಾಗಿ ಅತ್ಯುತ್ತಮ ‌ಕೆಲಸ ನಿರ್ವಹಿಸಿದ್ದೇವೆ. ಅದು ಮತ್ತೆ ಮರುಕಳಿಸಬೇಕು ಎಂಬುದು ರಾಜ್ಯದ ಜನರ ಆಸೆಯಾಗಿದೆ. ವಿಜಯೇಂದ್ರ‌, ‌ನಿಖಿಲ್‌ ಕುಮಾರಸ್ವಾಮಿ ಅವರುಗಳು, ‌ನಾನು‌ ಎರಡೂ ಪಕ್ಷಗಳ ಎಲ್ಲಾ ನಾಯಕರು ಜೊತೆಗೂಡಿ ‌ 2006-07ರ ಉತ್ತಮ ಸ್ಥಿತಿಯನ್ನು ಮರಳಿ ತರಲು ಶ್ರಮಿಸುತ್ತೇವೆ” ಎಂದರು

ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಹೋದರರ ರೀತಿ ರಾಜ್ಯದಲ್ಲಿ ಓಡಾಡಲಿದ್ದಾರೆ. ಎರಡೂ ಪಕ್ಣಗಳು ಒಟ್ಟಾಗಿ ‌ಹೋರಾಟ ನಡೆಸಲಿವೆ. ಆಡಳಿತ ಪಕ್ಷದ ತಪ್ಪುಗಳನ್ನು ದಾಖಲೆ ಸಮೇತ‌ ಎತ್ತಿ ಹಿಡಿಯುತ್ತೇವೆ ಎಂದರು.

ಜನತಾ‌ದರ್ಶನಕ್ಕೆ ಕೌಂಟರ್

ಸಿಎಂ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಟಾಂಗ್ ನೀಡಿದ ಕುಮಾರಸ್ವಾಮಿ ಅವರು; ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು‌ ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು‌ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.

ಏಕೈಕ ಸಂಸದರೂ ಇರಬಾರದು: ವಿಜಯೇಂದ್ರ‌

ರಾಜ್ಯದ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಒಟ್ಟಾಗಿ‌ ಹೋಗುವ ಕುರಿತು ಇಬ್ಬರು‌ ಮಾತುಕತೆ ನಡೆಸಿದ್ದೇವೆ. ದೆಹಲಿಯಲ್ಲಿ ‌ವರಿಷ್ಠರು ಸೀಟು‌ ಹಂಚಿಕೆ ‌ಬಗ್ಗೆ ಚರ್ಚಿಸುತ್ತಾರೆ ಎಂದು ವಿಜಯೇಂದ್ರ ಹೇಳಿದರು.

ಮೋದಿ,‌ ನಡ್ಡಾ,‌ ಅಮಿತ್ ಶಾ,‌ಎಚ್ ಡಿಕೆ ಅವರು ಈಗಾಗಲೇ ದೆಹಲಿಯಲ್ಲಿ ‌ಚರ್ಚೆ ನಡೆಸಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಲು ನಿರ್ಧರಿಸಲಾಗಿದೆ. ನಾನು ಕೂಡ ಈಗಾಗಲೇ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಹಿರಿಯರಾದ‌ ಎಚ್.ಡಿ.ಕುಮಾರಸ್ವಾಮಿ ಅವರ‌ ಜತೆಯೂ ಚರ್ಚಿಸಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಸಂಸದನೂ ಇರಬಾರದು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನು ಎದುರಿಸುವ ಕುರಿತು ನಾಲ್ಕು ಗೋಡೆಗಳ ಮಧ್ಯೆ ಕೂತು ಕಾರ್ಯತಂತ್ರ ಮಾಡಲಾಗುವುದು ಎಂದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.