ವಾರಾಂತ್ಯದ ಕರ್ಫ್ಯೂ ಅಂತ್ಯ: ಜನರ ಓಡಾಟ ಆರಂಭ! ಇರಲಿ ಸಾಮಾಜಿಕ ಅಂತರ
Team Udayavani, Apr 26, 2021, 8:33 AM IST
ಬೆಂಗಳೂರು: ಕೋವಿಡ್ -19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿತ್ತು. ಸೋಮವಾರ ಬೆಳಗ್ಗೆ 6 ಗಂಟೆಗೆ ವಾರಾಂತ್ಯದ ಕರ್ಫ್ಯೂ ಮುಗಿದಿದ್ದು, ಜನರು ವಾಹನಗಳು ರಸ್ತೆಗಿಳಿಯಲು ಅವಕಾಶ ನೀಡಲಾಗಿದೆ.
ಇಂದಿನಿಂದ ಜನರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳ ಅಂಗಡಿಗಳ ವ್ಯಾಪಾರಕ್ಕೆ ಸಂಜೆಯವರೆಗೆ ಅವಕಾಶವಿದೆ. ಬಸ್ ಗಳು ಕೂಡಾ ಓಡಾಟ ನಡೆಸುತ್ತಿವೆ.
ಇದನ್ನೂ ಓದಿ:ಮನೆಯಲ್ಲಿದ್ದೇ ಕೋವಿಡ್ ಗೆಲ್ಲಬಹುದು! ಶೇ. 90ರಷ್ಟು ಮಂದಿ ನಿಯಮ ಪಾಲಿಸಿ ಗುಣಮುಖರಾಗಿದ್ದಾರೆ
ಇಂದಿನಿಂದ ಕಠಿಣ ನಿಯಮ ಜಾರಿಯಲ್ಲಿರಲಿದೆ. ಅಗತ್ಯ ವಸ್ತುಗಳ ಮಾರಾಟ ಮತ್ತು ಖರೀದಿಗೆ ಮಾತ್ರ ಅವಕಾಶವಿದೆ. ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅವಕಾಶವಿಲ್ಲ. ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಇರಲಿದೆ. ರಾತ್ರಿ 9 ಗಂಟೆಯಿಂದ ರಾತ್ರಿ ಕರ್ಫ್ಯೂ ಇರಲಿದೆ.
ಇಂದು ಸಚಿವ ಸಂಪುಟ ಸಭೆ: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಂದರ್ಭ ಲಾಕ್ಡೌನ್ ಬಗ್ಗೆ ನಿರ್ಧಾರ ಆಗುವ ಸಾಧ್ಯತೆ ಇದೆ. ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಸೂಕ್ತ ಎಂಬುದು ತಾಂತ್ರಿಕ ಸಮಿತಿಯ ಅಭಿಪ್ರಾಯ.
ಇತ್ತೀಚೆಗಷ್ಟೇ ರಾಜ್ಯಪಾಲರ ನೇತೃತ್ವದಲ್ಲಿ ನಡೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕೆ. ಲಾಕ್ಡೌನ್ ಜಾರಿಗೊಳಿಸುವಂತೆ ಸಲಹೆ ನೀಡಿದ್ದರು. ತಾಂತ್ರಿಕ ಸಮಿತಿ ಸಲಹೆ ಆಧರಿಸಿ ಕ್ರಮ ಕೈಗೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇವೆಲ್ಲವೂ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಇಲ್ಲವೇ? ಹಿಂದೆ ಲಾಕ್ಡೌನ್ ವೇಳೆ ಇದ್ದ ನಿಯಮ ಈಗಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.