ರಾಜ್ಯಾದ್ಯಂತ ಮಾರುಕಟ್ಟೆಗಳು ಬಂದ್, ಇನ್ನು ಕಠಿಣ ನಿಯಮ ಜಾರಿ
Team Udayavani, Apr 24, 2021, 10:45 AM IST
ಬೆಂಗಳೂರು: ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಜಾರಿ ಮಾಡಿರುವ ವಾರಾಂತ್ಯದ ಕರ್ಫ್ಯೂ ಈಗ ಮತ್ತಷ್ಟು ಬಿಗಿಯಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಬಳಿಕ ಮಾರುಕಟ್ಟೆಗಳನ್ನು ಮುಚ್ಚಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ 10 ಗಂಟೆಯಾಗುತ್ತಿದ್ದಂತೆ ಮಾರುಕಟ್ಟೆಗಳನ್ನು ಪೊಲೀಸರು ಮುಚ್ಚಿಸಿದರು. ಗ್ರಾಹಕರನ್ನು ಹೊರಕ್ಕೆ ಕಳುಹಿಸಿ, ಮಾರುಕಟ್ಟೆ ಪ್ರವೇಶಿಸುವ ಮಾರ್ಗಕ್ಕೆ ಬ್ಯಾರಿಕೇಡ್ ಅಡ್ಡ ಇಟ್ಟ ದೃಶ್ಯಗಳು ಕಂಡುಬಂತು.
ಇದನ್ನೂ ಓದಿ:Covid-19; ಯುಎಇ, ಯುಕೆ ಬಳಿಕ ಕುವೈಟ್ ನಿಂದಲೂ ಭಾರತದ ವಿಮಾನ ಸಂಚಾರಕ್ಕೆ ನಿಷೇಧ
ರಾಜಧಾನಿ ಬೆಂಗಳೂರಿನಲ್ಲಿ ಸಂಪೂರ್ಣ ಅಘೋಷಿತ ಲಾಕ್ ಡೌನ್ ಸ್ಥಿತಿ ನಿರ್ಮಾಣವಾಗಿದೆ. ಯಾರೊಬ್ಬರೂ ಕೂಡ ರಸ್ತೆಗಳಿಗೆ ಇಳಿಯುವಂತಿಲ್ಲ. ರೋಡಿಗಿಳಿದರೆ ಲಾಠಿ ಚಾರ್ಜ್ ಮಾಡುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ಹೀಗಾಗಿ ರಸ್ತೆಗಳು ಬಿಕೋ ಎನ್ನುತ್ತಿವೆ. ಅನಗತ್ಯವಾಗಿ ಓಡಾಡುವವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.
ಬೆಂಗಳೂರು ಮೆಟ್ರೊ ಬಂದ್: ಮೇ 4ರವರೆಗೆ ಬೆಂಗಳೂರಿನಲ್ಲಿ ವಾರಾಂತ್ಯಗಳಲ್ಲಿ ಮೆಟ್ರೊ ರೈಲು ಕೂಡ ಸಂಚರಿಸುವುದಿಲ್ಲ. ನಾಡಿದ್ದು ಸೋಮವಾರದಿಂದ ಮೆಟ್ರೊ ಸಂಚಾರ ವಾರದ ದಿನಗಳಲ್ಲಿ 90 ನಿಮಿಷ ಬೇಗನೆ ಬಂದ್ ಆಗುತ್ತದೆ. ಕೊನೆಯ ಮೆಟ್ರೊ ರೈಲು ಬೈಯಪ್ಪನಹಳ್ಳಿಯಿಂದ, ಮೈಸೂರು ರಸ್ತೆ, ನಾಗಸಂದ್ರ ಮತ್ತು ಟಾಟಾ ಸಿಲ್ಕ್ ಇನ್ಸ್ಟಿಟ್ಯೂಟ್ ಗೆ ಸಂಚರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.