ಪಶ್ಚಿಮಘಟ್ಟ ಸೂಕ್ಷ್ಮ ವಲಯ:ಕೇಂದ್ರಕ್ಕೆ ರಾಜ್ಯದ ಆಕ್ಷೇಪಣೆ
Team Udayavani, Mar 8, 2017, 8:18 AM IST
ಬೆಂಗಳೂರು: ಡಾ.ಕಸ್ತೂರಿ ರಂಗನ್ ವರದಿ ಪ್ರಕಾರ ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸುವುದರ ಜತೆಗೆ, ರಾಜ್ಯದ ಜನರ ಹಿತಾಸಕ್ತಿ
ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಬಳಿ ಸರ್ವಪಕ್ಷ ನಿಯೋಗ ಸೇರಿ ಎಲ್ಲ ರೀತಿಯ ಹೋರಾಟಗಳಿಗೂ ಸಿದ್ಧ ಎಂದು ಅರಣ್ಯ ಸಚಿವ ರಮನಾಥ್ ರೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ 3 ಬಾರಿ ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ತಕ್ಷಣ ಇದಕ್ಕೆ ಮತ್ತೂಮ್ಮೆ ಆಕ್ಷೇಪಣೆ ಸಲ್ಲಿಸುತ್ತೇವೆ ಎಂದರು. ಪಶ್ಚಿಮಘಟ್ಟ ಸೂಕ್ಷ್ಮ ವಲಯದ ಬಗ್ಗೆ ಕೇಂದ್ರ ಸರ್ಕಾರ ಕರೆದ ಸಂಸದರ ಸಭೆಗೆ ಹಾಜರಾಗದ ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ್‌ಸಿಂಹ ರಾಜ್ಯ
ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಇವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ಕಾಡ್ಗಿಚ್ಚು ಪ್ರಕರಣಗಳ ಹಿಂದೆ ಬೇರೆಯದೇ ಷಡ್ಯಂತ್ರ ಇದೆ ಎಂಬ ಗುಮಾನಿ ಇದೆ. ಇದೇ ಕಾರಣಕ್ಕೆ ಸಿಐಡಿಗೆ ಪ್ರಕರಣದ ತನಿಖೆ ವಹಿಸಲಾಗಿದೆ. ನಮ್ಮಲ್ಲಿರುವ ವರದಿ ಪ್ರಕಾರ 100 ಹೆಕ್ಟೇರ್ ಪ್ರದೇಶ ಮಾತ್ರ ಬೆಂಕಿಗೆ ಆಹುತಿಯಾಗಿದೆ. ಬಂಡೀಪುರದಲ್ಲಿ 40,
ಕಪ್ಪತ್ತಗುಡ್ಡದಲ್ಲಿ 32 ಹೆಕ್ಟೇರ್ ಹಾಗೂ ಇತರೆ ಭಾಗದಲ್ಲಿ 28 ಹೆಕ್ಟೇರ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಡ್ಗಿಚ್ಚು ನಿಯಂತ್ರಣಕ್ಕೆ ಪ್ರತಿವರ್ಷದಂತೆ ಎಲ್ಲ ಅಗತ್ಯ ಕ್ರಮ (ಫೈರ್‌ಲೈನ್) ಕೈಗೊಳ್ಳಲಾಗಿತ್ತು.
ರಮಾನಾಥ ರೈ, ಅರಣ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.