ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?
Team Udayavani, Mar 15, 2022, 11:35 AM IST
ಬೆಂಗಳೂರು: ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮಂಗಳವಾರ ಪ್ರಕಟಿಸಿದೆ. ವಿವಾದಗಳು, ಪ್ರತಿಭಟನೆಗಳು, ಆರೋಪ- ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಹಿಜಾಬ್ ವಿಚಾರದ ಕುರಿತು ಇಂದು ಹೈಕೋರ್ಟ್ ತೀರ್ಪು ನೀಡಿದೆ.
ಹೈಕೋರ್ಟ್ ಕೇಳಿಕೊಂಡಿದ್ದ ಪ್ರಶ್ನೆಗಳು
1 ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅಡಿಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಾಗಿದೆಯೇ?
2 ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು ಶಾಲಾ ಸಮವಸ್ತ್ರದ ನಿಯಮವನ್ನು ಕಾನೂನುಬದ್ಧವಾಗಿ ಅನುಮತಿಸಲಾಗಿದೆಯೇ?
3 ಫೆಬ್ರುವರಿ 5 ರ ಸರ್ಕಾರದ ಆದೇಶ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯೇ.? ಏಕಪಕ್ಷೀಯವಾಗಿ ಸರ್ಕಾರ ಆದೇಶ ನೀಡಿದೆಯೇ?
ಈ ಕುರಿತು ಇಂದು ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ರಿಟ್ ಅರ್ಜಿಗಳನ್ನು ವಜಾ ಮಾಡಿದೆ.
ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು
1 ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿನ ಅತ್ಯಗತ್ಯ ಆಚರಣೆ ಅಲ್ಲ.
2 ಸಮವಸ್ತ್ರ ನಿಗದಿಪಡಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ.
3 ಸರ್ಕಾರದ ವಸ್ತ್ತಸಂಹಿತೆ ಪ್ರಶ್ನಿಸುವಂತಿಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶ ಕಾನೂನು ಬದ್ದವಾಗಿದೆ.
ಇದನ್ನೂ ಓದಿ:ವಿದ್ಯೆಗಿಂತ ದೊಡ್ಡದು ಯಾವುದೂ ಇಲ್ಲ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಬೊಮ್ಮಾಯಿ
4 ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ಕೋರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಹಿನ್ನೆಲೆ: ಉಡುಪಿಯ ಕಾಲೇಜಿನಲ್ಲಿ ಆರಂಭವಾದ ಹಿಜಾಬ್- ಕೇಸರಿ ಶಾಲು ವಿವಾದ ನಂತರ ರಾಜ್ಯದ ಹಲವು ಜಿಲ್ಲೆಗಳಿಗೆ ಹಬ್ಬಿತ್ತು. ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. ನಂತರ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು.
ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರೂ ಸೇರಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ಕುರಿತು ಸತತ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ಫೆ.25ರಂದು ತೀರ್ಪು ಕಾಯ್ದಿರಿಸಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.