ಇಲ್ಲಿದ್ದೇ ಏನೂ ಮಾಡದ ಎಚ್ ಡಿಕೆ ವಿದೇಶದಲ್ಲೇನು ಮಾಡಲು ಸಾಧ್ಯ?: ಎಂ.ಬಿ.ಪಾಟೀಲ್
Team Udayavani, Aug 5, 2023, 5:38 PM IST
ವಿಜಯಪುರ : ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ, ವಿದೇಶದಲ್ಲಿ ಕುಳಿತಿದ್ದ ಅವರಿಗೆ ವರ್ಗಾವಣೆ ದಂಧೆಯ ಬಗ್ಗೆ ಮಾಹಿತಿ ಬಂತೆ ಎಂದು ಕುಟುಕಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ , ಈ ಹಿಂದೆ ಪೆನ್‍ಡ್ರೈವ್ ಇದೆ ಎಂದಿದ್ದು, ಏನಾಯಿತು ಎಂಬುದು ಮಾಧ್ಯಮದವರಿಗೆಲ್ಲ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 134 ಶಾಸಕರಿರುವ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಸ್ಥಿರ ಮಾಡಲು ಕುಮಾರಸ್ವಾಮಿ ಅವರಿಂದ ಸಾಧ್ಯವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಸುಸ್ಥಿರ ಆಡಳಿತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಇಲ್ಲಿದ್ದುಕೊಂಡೇ ಏನೂ ಮಾಡಲಾಗದ ಕುಮಾರಸ್ವಾಮಿ ಅವರು, ವಿದೇಶದಲ್ಲಿ ಕುಳಿತು ಅದಿನ್ನೇನು ಮಾಡಲು ಸಾಧ್ಯ. ಮೊದಲು ತಮ್ಮ 20 ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಲಿ ಎಂದು ಗೇಳಿ ಮಾಡಿದರು.
ಕುಮಾರಸ್ವಾಮಿ ಸರ್ಕಾರದಲ್ಲಿ ನಾನೇ ಗೃಹ ಸಚಿವನಾಗಿದೆ. ಅವರ ಸರ್ಕಾರದಲ್ಲಿ ವರ್ಗಾವಣೆ ನಡೆದೆಯೇ ಇಲ್ಲವೇ ಎಂದು ಪ್ರಶ್ನಿಸಿದ ಸಚಿವ ಪಾಟೀಲ, ವರ್ಗಾವಣೆ ಎಂಬುದು ಆಡಳಿತಾತ್ಮ ವಿಷಯ. ವಾಮಾಚಾರದ ಬಗ್ಗೆ ಕುಮಾರಸ್ವಾಮಿ ಅವರಿಗೆ ಗೊತ್ತಿಲ್ಲದೇ ಇದ್ದರೆ ಎಚ್.ಡಿ.ರೇವಣ್ಣ ಅವರನ್ನು ಕೇಳಲಿ ಎಂದು ಕುಟುಕಿದರು.
ಪರಿಶಿಷ್ಟರಿಗೆ ಮೀಸಲಿದ್ದ ಅನುದಾನವನ್ನು ದುರ್ಬಳಕೆ ಕುರಿತು ಮಾಜಿ ಸಚಿವ ಮುರುಗೇಶ ನಿರಾವಣಿ ಅವರ ಟೀಕೆಗೆ ತಿರುಗೇಟು ನೀಡಿರುವ ಸಚಿವ ಪಾಟೀಲ, ಹಿಂದೆ ತಮ್ಮದೇ ಸರ್ಕಾರದಲ್ಲಿ ಪರಿಶಿಷ್ಟರ ಹಣವನ್ನು ದುರ್ಬಳಕೆ ಮಾಡಿಕೊಂಡದ್ದು ಹೇಗೆ ಎಂಬುದನ್ನು ಅವರನ್ನೇ ಕೇಳಿ ನೋಡಿ ಎಂದು ಪ್ರತಿದಾಳಿ ನಡೆಸಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಹೇಳಿದಂತೆ ಅಚ್ಚೆ ದಿನ್ ಬರಲಿಲ್ಲ, ರೈತರ ಆದಾಯ ದ್ವಿಗುಣಗೊಳ್ಲಲಿಲ್ಲ, ಪ್ರತಿ ವರ್ಷ 2 ಕೋಟಿಯಂತೆ 18 ಲಕ್ಷ ಉದ್ಯೋಗ ಸೃಷ್ಟಿಯಾಗಿಗಲಿಲ್ಲ. ಬದಲಾಗಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಟೀಕಿಸಿದರು.
ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಶಕ್ತಿಯೋಜನೆ, ಅನ್ನಭಾಗ್ಯ ಹಾಗೂ ಇದೀಗ ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇತರೆ ಯೋಜನೆಗಳನ್ನು ಅನುಷ್ಠಾನ ಮಾಡಲಿದೆ. ಇದರೊಂದಿಗೆ ರಾಜ್ಯದ ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಾವಾಗಲೂ ಬದ್ಧವಾಗಿದೆ ಎಂದರು.
ಯಾವುದೇ ಮೀಸಲಾತಿ ಘೋಷಿಸಬೇಕಿದ್ದರೂ ಶೇ.50 ರಷ್ಟು ಮಿತಿ ದಾಟುವಂತಿಲ್ಲ ಎಂಬುದು ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲು ಪ್ರಕರಣದಲ್ಲಿ ಸ್ಪಷ್ಟವಾಗಿ ಗೊತ್ತಿತ್ತು. ಹೀಗಿದ್ದೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಅಲ್ಪಸಂಖ್ಯಾತರ ಶೇ.4 ಮೀಸಲು ರದ್ದು ಮಾಡಿದೆ. ಪರಿಶಿಷ್ಟರಿಗೆ ಮೀಸಲು ಪ್ರಮಾಣ ಹೆಚ್ಚಳವನ್ನು ಕೇಂದ್ರ ಸರ್ಕಾರ 9ನೇ ಶಡ್ಯೂಲ್ ತಿದ್ದುಪಡಿ ಮಾಡಬೇಕಿದೆ. ಹೀಗಿದ್ದೂ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆ ಹಿನ್ನೆಲೆಯಲ್ಲಿ ಮೀಸಲು ಹೆಚ್ಚಳ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.