ವಿಟಿಯು ವಿಭಜನೆ ಅಗತ್ಯ ಏನಿದೆ?
Team Udayavani, Feb 14, 2019, 1:24 AM IST
ವಿಧಾನಪರಿಷತ್: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹಣಕಾಸು, ನಗರಾಭಿವೃದ್ಧಿ , ಉನ್ನತ ಶಿಕ್ಷಣ ಸೇರಿ ಎಲ್ಲ ಪ್ರಮುಖ ಖಾತೆಗಳು ದಕ್ಷಿಣ ಕರ್ನಾಟಕಕ್ಕೆ.ಸಕ್ಕರೆ, ಈರುಳ್ಳಿ, ಬೆಳ್ಳುಳ್ಳಿ ಎಲ್ಲಾ ಉತ್ತರ ಕರ್ನಾಟಕಕ್ಕೆ. ಯಾಕೆ ಹೀಗೆ? ಇದಕ್ಕೆ ಜನರಾದರೂ ಏನಂತಾರೆ? ಸ್ವಲ್ಪ ಯೋಚನೆ ಮಾಡಿ…- ಸ್ವತಃ ಕಾಂಗ್ರೆಸ್ ಸದಸ್ಯ ಎಸ್.ಆರ್. ಪಾಟೀಲ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರೀತಿ ಇದು.
ಬುಧವಾರ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಮಹಾಂತೇಶ ಕವಟಗಿಮಠ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿಭಜನೆ ಬಗ್ಗೆ ಪ್ರಸ್ತಾಪಿಸಿದರು. ಆಗ ಇದಕ್ಕೆ ಪೂರಕವಾಗಿ ಮಾತನಾಡಿದ ಎಸ್.ಆರ್.ಪಾಟೀಲ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ವಿಭಜಿಸುವ ಅವಶ್ಯಕತೆ ಏನಿದೆ? ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿದೆ. ಈಗಾಗಲೇ ಪ್ರಮುಖ ಖಾತೆಗಳೆಲ್ಲವೂ ದಕ್ಷಿಣ ಕರ್ನಾಟಕದವರ ಪಾಲಾಗಿವೆ. ಉತ್ತರ ಕರ್ನಾಟಕಕ್ಕೆ ಬರೀ ಸಕ್ಕರೆ,ಈರುಳ್ಳಿ, ಬೆಳ್ಳುಳ್ಳಿಯಂತಹ ಖಾತೆಗಳು ಉಳಿದಿವೆ. ಈಗ ವಿವಿಯನ್ನೂ ಆ ಕಡೆ ತೆಗೆದುಕೊಂಡು ಹೋಗುತ್ತಿದ್ದೀರಿ. ಜನ ಏನಂತಾರೆ ಸ್ವಲ್ಪ ಯೋಚಿಸಿ ಎಂದು ಬೇಸರ ವ್ಯಕ್ತಪಡಿಸಿದರು.
ಇದಕ್ಕೆ ಬಿಜೆಪಿ ಸದಸ್ಯ ಅರುಣ ಶಹಾಪೂರ ಮತ್ತಿತರ ಸದಸ್ಯರು ಕೂಡ ದನಿಗೂಡಿಸಿದರು. ಇದು ಅತ್ಯಂತ ಗಂಭೀರ ಪರಿಣಾಮ ಬೀರಲಿದ್ದು, ಬೆಳಗಾವಿ ಮತ್ತು ಉತ್ತರ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಾರ್ವಜನಿಕರು ಈ ವಿಭಜನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕವಟಗಿಮಠ ಸಭೆಯ ಗಮನಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.