“ಎಲ್ಲಿದ್ದರು ಇವರೆಲ್ಲಾ”? ರೈತ ನಾಯಕರ ಮುಂದೆ ಸಾಲು ಸಾಲು ಪ್ರಶ್ನೆಯಿಟ್ಟ ಕುಮಾರಸ್ವಾಮಿ
Team Udayavani, Dec 10, 2020, 12:02 PM IST
ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಬೆಂಬಲಿಸಿದ ತಮ್ಮ ನಡೆಯನ್ನು ವಿರೋಧಿಸಿದ ರೈತ ನಾಯಕರ ಮುಂದೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘ ಎಂದಿದ್ದಾರೆ. ಅದಲ್ಲದೆ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‌ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಎಚ್ ಡಿಕೆ ಟ್ವೀಟ್ ಗಳು
2013-14ರ ಕಾಲ. ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು?
ಮಹದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು, ನಾನು. ಸರ್ಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?
ಇದನ್ನೂ ಓದಿ:ಕಲಾಪ ಬಹಿಷ್ಕಾರ ಹಿನ್ನೆಲೆ: ಕಾಂಗ್ರೆಸ್ ನಾಯಕರಿಗೆ ಸಂಧಾನಕ್ಕೆ ಆಹ್ವಾನ
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು?
ರೈತರ ₹25 ಸಾವಿರ ಕೋಟಿ ಮೊತ್ತದ ಸಾಲಮನ್ನಾ ಮಾಡುವಾಗ ರೈತ ಸಂಘಗಳ ಬಳಿ ಏನಾದರೂ ಕಮಿಷನ್ ಪಡೆದೆನೇ? ಕೆಲ ರೈತ ನಾಯಕರ ಬಾಯಲ್ಲಿ ಬರುತ್ತಿರುವ ‘ಕಿಕ್‌ಬ್ಯಾಕ್’ ಏನಾದರೂ ಪಡೆದೆನೇ? ರೈತ ನಾಯಕರು ಎನಿಸಿಕೊಂಡವರಿಗೆ ಸಾಲಮನ್ನಾ ವಿಚಾರವಾಗಿ ನನ್ನ ಕಡೆಗೆ ಕೃತಜ್ಞತೆ ಇದೆಯೇ? ರೈತರು ಸಾಲದ ಸುಳಿಯಲ್ಲಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?
ರೈತರಿಗಾಗಿ ಇಂಥ ಹಲವು ಕಾರ್ಯಕ್ರಮಗಳನ್ನು ನಾನು ಸ್ವಯಂ ಪ್ರೇರಣೆಯಿಂದ ಮಾಡಿದ್ದೇನೆ. ಇವತ್ತು ನನ್ನ ವಿರುದ್ಧ ಅರಚುತ್ತಿರುವ ಇದೇ ರೈತ ನಾಯಕರೇನಾದರೂ ರೈತರ ಸಾಲಮನ್ನಾಕ್ಕಾಗಿ ನನ್ನ ಬಳಿ ಅರ್ಜಿ ಕೊಟ್ಟಿದ್ದರೇ? ಸಾಲಮನ್ನ ನನ್ನ ಕಾರ್ಯಕ್ರಮ. ಇಷ್ಟಾದರೂ 8 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ ಮಾಡಿರುವ ಆ ನಾಯಕರಿಗೆ ದೇವರು ಒಳ್ಳೆಯದು ಮಾಡಲಿ.
ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ನೀರಾವರಿ, ಕೃಷಿ, ರೈತರ ಆರ್ಥಿಕ ಸಬಲೀಕರಣಕ್ಕೆ ರಾಜ್ಯದಲ್ಲಿ ಏನಾದರೂ ಒಳ್ಳೆಯದಾಗಿದ್ದರೆ ಅದು ಜೆಡಿಎಸ್ ನಿಂದ ಮಾತ್ರ. ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘವೂ ಹೌದು ಎಂಬುದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ.
ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‌ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ.
ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.