Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
ರಾಜ್ಯ ಸರ್ಕಾರದಿಂದ ವಿವರಣೆ ಕೇಳಿದ ಹೈಕೋರ್ಟ್
Team Udayavani, Nov 16, 2024, 6:45 AM IST
ಬೆಂಗಳೂರು: ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ವಕ್ಫ್ ಮಂಡಳಿಗೆ ನೀಡಿರುವುದು ಎಲ್ಲಿಯೂ ಕೇಳಿಲ್ಲ ಎಂದು ಹೇಳಿರುವ ಹೈಕೋರ್ಟ್, ಯಾವ ಕಾನೂನಿನಡಿ ಅಧಿಕಾರ ಬಳಸಿ ಇಂತಹ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಉತ್ತರಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಮುಸ್ಲಿಂ ಸಮುದಾಯದ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರಕಾರ 2023ರ ಆಗಸ್ಟ್ 30ರಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಎ. ಆಲಂ ಪಾಷಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಸರಕಾರದ ಪರ ವಕೀಲರು ಹಾಜರಾಗಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಆದರೆ, ಅದಕ್ಕೆ ಒಪ್ಪದ ನಾಯಾಲಯ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿ, ಸರಕಾರ ಮುಂದಿನ ವಿಚಾರಣೆ ವೇಳೆಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು. ಅಲ್ಲದೆ, ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಬಹುದು ಎಂದು ವಕ್ಫ್ ಕಾಯ್ದೆಯಲ್ಲಿ ಎಲ್ಲಿದೆ ಎಂದು ಸಾಬೀತುಪಡಿಸಬೇಕೆಂದು ನ್ಯಾಯಾಲಯ ಸರಕಾರದ ಪರ ವಕೀಲರಿಗೆ ಮೌಖಿಕವಾಗಿ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.