MUDA ವೈಟ್ನರ್‌ ವಾರ್‌ ; ಸಿದ್ದರಾಮಯ್ಯ vs ಎಚ್‌.ಡಿ. ಕುಮಾರಸ್ವಾಮಿ


Team Udayavani, Aug 27, 2024, 2:05 AM IST

HDK (3)

ಬೆಂಗಳೂರು: ಮುಡಾ ದಾಖಲೆಗಳಿಗೆ “ವೈಟ್ನರ್‌’ ಹಚ್ಚಿ ಸತ್ಯವನ್ನು ಮರೆಮಾಚಲು ಯತ್ನಿಸಲಾಗಿದೆ ಎಂಬ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

“ವೈಟ್ನರ್‌ ಹಿಂದಿರುವ ಅಕ್ಷರಗಳೇನು? ಎಂಬುದನ್ನು ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ’ ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವೈಟ್ನರ್‌ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್‌ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ’ ಎಂದು ಕಾಲೆಳೆದಿದ್ದಾರೆ. ಸಿಎಂ ಮಾಡಿರುವ ಟ್ವೀಟ್‌ನಲ್ಲಿ ಹಾಕಿರುವ ವೀಡಿಯೋದಲ್ಲಿ ಟಾರ್ಚ್‌ ಬೆಳಕಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ರೀತಿ ಟೀಕಿಸಿದ್ದಾರೆ.
ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹಚ್ಚಿದ್ದನ್ನೇ ಮಹಾನ್‌ ಅಪರಾಧವೆಂಬಂತೆ ಗಂಟಲು ಹರಿದು ಕೊಂಡ ಬಿಜೆಪಿ -ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು? ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ; ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ಸಿಎಂ ತಿಳಿಸಿದ್ದಾರೆ.

ಎಚ್‌ಡಿಕೆ ತಿರುಗೇಟೇನು?
ವೈಟ್ನರ್‌ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್‌ ಹಾಕಿ ತಡಕಾಡುತ್ತಿರು ವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಇದು ಮೂಲ ದಾಖಲೆ, ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್‌ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ನನ್ನ ಪ್ರಶ್ನೆ; ಈ ದಾಖಲೆಯನ್ನೇಕೆ ನೀವು ನ್ಯಾಯಾಲಯಕ್ಕೆ ಕೊಟ್ಟಿಲ್ಲ!? ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್‌ ಬಿಟ್ಟು ತೋರಿಸುತ್ತೀರಾ..? ಶಿಶುಪಾಲನ ಹಾಗೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.