ಸರ್ಕಾರ ಚಿಂತಾಜನಕ ಸ್ಥಿತಿಗೆ ಯಾರು ಕಾರಣ?


Team Udayavani, Jul 9, 2019, 3:06 AM IST

sark-chin

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನದ ಅಂಚಿಗೆ ತಲುಪಲು ಕೆಲ ವಿಚಾರಗಳಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೋದರರು ಸೇರಿಕೊಂಡಂತೆ ಯಾರು ಪ್ರಮುಖ ಕಾರಣ? ಸಚಿವರ ಸಾಮೂಹಿಕ ರಾಜೀನಾಮೆ ಪಡೆಯುವ ಸಂದರ್ಭದಲ್ಲಿ ಕೆಲವು ಸಚಿವರು ಈ ಬಗ್ಗೆ ಅಸಮಾಧಾನ ಹೊರಹಾಕಿದರು. ಅವರ ಆರೋಪ ಎಚ್‌.ಡಿ. ರೇವಣ್ಣ, ಸಾ.ರಾ. ಮಹೇಶ್‌ ಮೇಲೆ ನೇರವಾಗಿತ್ತು. ಸಮಸ್ಯೆ ಎದುರಾದಾಗ ನೀವು ಎಚ್ಚರಿಕೆ ವಹಿಸಿ ಸರಿಪಡಿಸಿದ್ದರೆ ಇಂತಹ ಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಹೇಳಿದರು ಎಂದು ಹೇಳಲಾಗಿದೆ.

ಮೈತ್ರಿ ಸರ್ಕಾರದಲ್ಲಿ ಶಾಸಕರ ಅಸಮಾಧಾನ ಹೆಚ್ಚಾಗಲು ಜೆಡಿಎಸ್‌ ಸಚಿವರ ನಡವಳಿಕೆಯೂ ಕಾರಣ ಎಂದು ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಭೆಯಲ್ಲಿಯೇ ಕೆಲವು ಶಾಸಕರು ಅವರ ನಡವಳಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಕಾಂಗ್ರೆಸ್‌ ಶಾಸಕರಿಗೆ ಗೌರವ ನೀಡದಿರುವುದೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಅದಕ್ಕೆ ಮುಖ್ಯಮಂತ್ರಿ, ಸದ್ಯಕ್ಕೆ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸೋಣ ಬೇರೆ ಸಮಸ್ಯೆಗಳ ಬಗ್ಗೆ ಮುಂದೆ ಚರ್ಚೆ ಮಾಡೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸಚಿವ ಎಚ್‌.ಡಿ.ರೇವಣ್ಣ ಅವರು ಕಾಂಗ್ರೆಸ್‌ ಶಾಸಕರ ಮನವಿಗೆ ಸ್ಪಂದಿಸುತ್ತಿರಲಿಲ್ಲ. ಬೆಂಗಳೂರಿನ ಮೂಲಸೌಕರ್ಯ ಯೋಜನೆಗಳ ಅನುಷ್ಠಾನ ಲೋಕೋಪಯೋಗಿ ಇಲಾಖೆಯಿಂದಲೇ ಮಾಡಿಸುವಂತೆ ಪಟ್ಟು ಹಿಡಿದಿದ್ದಕ್ಕೆ ಶಾಸಕರ ಅಸಮಾಧಾನವಿತ್ತು.

ಮತ್ತೂಬ್ಬ ಸಚಿವ ಸಾ.ರಾ.ಮಹೇಶ್‌ ಸಹ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿದ್ದ ಎಚ್‌.ವಿಶ್ವನಾಥ್‌ ಅವರ ವಿಚಾರದಲ್ಲಿ ಸರಿಯಾಗಿ ನಡೆದುಕೊಳ್ಳಲಿಲ್ಲ. ಅವರ ಅಳಿಯನ ವರ್ಗಾವಣೆಗೆ ಕೋರಿದರೂ ಕುಡುಕ ಪಟ್ಟ ಕಟ್ಟಿ ಮಾನಸಿಕವಾಗಿ ಹಿಂಸೆ ನೀಡಲಾಯಿತು. ಕೆ.ಆರ್‌.ನಗರ ಪುರಸಭೆಯಲ್ಲಿ ಒಂದು ವಾರ್ಡ್‌ನ ಟಿಕೆಟ್‌ ಕೇಳಿದರೂ ರಾಜ್ಯಾಧ್ಯಕ್ಷರಿಗೆ ಕೊಡಲಿಲ್ಲ ಎಂಬುದೇ ಆಕ್ರೋಶ ಸ್ಫೋಟಗೊಳ್ಳಲು ಕಾರಣ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ನಿರ್ಲಕ್ಷ್ಯ ವಹಿಸಿದರು. ಪ್ರತಿ ಇಲಾಖೆಯಲ್ಲಿ ರೇವಣ್ಣ ಅವರ ಹಸ್ತಕ್ಷೇಪ ತಡೆಗಟ್ಟಿ, ವಿಶ್ವನಾಥ್‌ ವಿಚಾರದಲ್ಲಿ ಸಾ.ರಾ.ಮಹೇಶ್‌ ಕರೆಸಿ ಮಾತನಾಡಿದ್ದರೆ ಸರಿ ಹೋಗುತ್ತಿತ್ತು ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿಬರುತ್ತಿವೆ.

ನಿರ್ಲಕ್ಷ್ಯ ಧೋರಣೆ: ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಎರಡೂ ಪಕ್ಷಗಳ ಶಾಸಕರು ಹಾಗೂ ಸರ್ಕಾರದ ನಡುವೆ ಸಮನ್ವಯತೆ ತರುವಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿರುವುದು ಮೈತ್ರಿ ಸರ್ಕಾರ ಪತನದ ಅಂಚಿಗೆ ಬಂದು ನಿಲ್ಲುವಂತೆ ಮಾಡಿದೆ.
ಕಳೆದ ಆರು ತಿಂಗಳಿಂದಲೂ ತಮ್ಮವರೆನಿಸಿಕೊಂಡಿರುವ ಶಾಸಕರೇ ಬಂಡಾಯದ ನಾಯಕತ್ವ ವಹಿಸಿದ್ದರೂ, ಅವರನ್ನು ಸಮಾಧಾನಪಡಿಸಿ ಹದ್ದುಬಸ್ತಿನಲ್ಲಿಡುವ ಕಾರ್ಯಕ್ಕೆ ಮುಂದಾಗದೇ, ಅವರ ನಡೆಯನ್ನು ಪರೋಕ್ಷವಾಗಿ ಬೆಂಬಲಿಸುತ್ತಲೇ ಬಂದಿರುವುದು ಇಂದಿನ ಈ ಪರಿಸ್ಥಿತಿಗೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಮೇಶ್‌ ಜಾರಕಿಹೊಳಿ ಬಂಡಾಯವೆದ್ದು ಮುಂಬೈಗೆ ಹೋಗಿದ್ದಾಗಲೇ ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಸ್ಪೀಕರ್‌ಗೆ ದೂರು ನೀಡಿದ್ದರೂ, ಅದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗದೇ ನಿರ್ಲಕ್ಷ್ಯ ವಹಿಸಿ, ಬಂಡಾಯಗಾರರ ಅಸಮಾಧಾನ ಮತ್ತಷ್ಟು ಹೆಚ್ಚಳವಾಗಲು ಪ್ರೇರಣೆ ನೀಡಿರುವುದು ಅತೃಪ್ತರನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡಿದಂತಾಯಿತು ಎನ್ನಲಾಗುತ್ತಿದೆ.

ಎಲ್ಲವೂ ತಮ್ಮ ಹಿಡಿತದಲ್ಲಿಯೇ ಇದ್ದರೂ, ಮೈತ್ರಿ ಸರ್ಕಾರವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಅತೃಪ್ತರ ನಡೆಯನ್ನು ಪರೋಕ್ಷವಾಗಿ ಸಿದ್ದರಾಮಯ್ಯ ಬೆಂಬಲಿಸುತ್ತ ಅತೃಪ್ತರು ಹಾಗೂ ಸರ್ಕಾರ ಎರಡರ ಜುಟ್ಟೂ ನನ್ನ ಕೈಯಲ್ಲಿಯೇ ಇರಬೇಕೆಂದು ಬಯಸಿದ್ದೇ ಇಷ್ಟೆಲ್ಲ ಬೆಳವಣಿಗೆಗೆ ಕಾರಣ ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

ವಿಫಲ ಯತ್ನ: ವಿಧಾನಸಭೆಯಲ್ಲಿ 104 ಸದಸ್ಯ ಬಲ ಹೊಂದಿದ್ದ ಹಿನ್ನೆಲೆಯಲ್ಲಿ ಆರಂಭದಲ್ಲೇ ಅಧಿಕಾರ ಹಿಡಿಯುವ ಪ್ರಯತ್ನ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರೂ ಬಹುಮತ ಸಾಬೀತುಪಡಿಸಲಾಗದೆ ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡಿದ್ದರು. ಆನಂತರ ರಚನೆಯಾದ ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನಗೊಂಡವರನ್ನು ಸಂಪರ್ಕಿಸಿ ವಿಶ್ವಾಸ ಗಳಿಸುವ ಕಾರ್ಯ ಆರಂಭಿಸಿದರು. ಅತೃಪ್ತರ ಸಂಖ್ಯೆ ಹೆಚ್ಚಾದಂತೆ ಆಗಾಗ್ಗೆ ಮೈತ್ರಿಸರ್ಕಾರಕ್ಕೆ ಸಂಖ್ಯಾಬಲವಿಲ್ಲ ಎಂಬುದನ್ನು ಸಾಬೀತುಪಡಿಸುವ ಪ್ರಯತ್ನ ನಡೆದರೂ ಯಶ ಕಾಣಲಿಲ್ಲ.

ಸಚಿವ ಸ್ಥಾನದಿಂದ ರಮೇಶ್‌ ಜಾರಕಿಹೊಳಿಯನ್ನು ಕೈಬಿಟ್ಟ ಬಳಿಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಿಜೆಪಿ ನಂತರ ಅವರ ಮೂಲಕವೇ ಇತರೆ ಅತೃಪ್ತರನ್ನು ಸೆಳೆಯುವ ಕಾರ್ಯದಲ್ಲಿ ಯಶಸ್ಸು ಕಂಡಿತು. ಜತೆಗೆ ಸಚಿವ ಸ್ಥಾನ ವಂಚಿತರು, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಕೆಲ ಸಚಿವರ ನಿರ್ಲಕ್ಷ್ಯದಿಂದ ಬೇಸತ್ತ ಶಾಸಕರನ್ನು ಸಂಪರ್ಕದಲ್ಲಿಟ್ಟುಕೊಂಡು ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು.

ಪ್ರಿಯಾಂಕ್‌ ಖರ್ಗೆಯವರಿಗೆ ಸಚಿವ ಸ್ಥಾನ ನೀಡಿದ್ದರಿಂದ ಅತೃಪ್ತರಾಗಿದ್ದ ಡಾ.ಉಮೇಶ್‌ ಜಾಧವ್‌ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು ಬಿಜೆಪಿ ಆತ್ಮವಿಶ್ವಾಸ ಹೆಚ್ಚಿಸಿತು. ಅದನ್ನೇ ಬಳಸಿಕೊಂಡು ಇತರೆ ಅತೃಪ್ತರ ಮನವೊಲಿಸಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ಹಾದಿ ಸುಗಮಗೊಳಿಸುವಲ್ಲಿ ಯಶಸ್ಸು ಕಂಡರು. ಐದು ಬಾರಿ ನಡೆಸಿದ ಪ್ರಯತ್ನ ವಿಫ‌ಲವಾದರೂ ವಿಚಲಿತರಾಗದ ಯಡಿಯೂರಪ್ಪ ಅತೃಪ್ತರೊಂದಿಗೆ ನಿಕಟ ಸಂಪರ್ಕ, ವಿಶ್ವಾಸ ಮುಂದುವರಿಸಿದ್ದರ ಫ‌ಲ ಈಗ ಸಿಗಲಾರಂಭಿಸಿದಂತಿದೆ.

ಟಾಪ್ ನ್ಯೂಸ್

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.