ಯಾರು ಏನೇ ಹೇಳಿದ್ರೂ ನಾವೇ ಗೆಲ್ಲೋದು
Team Udayavani, Oct 7, 2017, 9:07 AM IST
ಬೆಂಗಳೂರು: “ಯಾರು ಏನೇ ಹೇಳಿದರೂ, 2018ರ ಚುನಾವಣೆಯಲ್ಲಿ ನಾವೇ ಗೆಲ್ಲೋದು’ -ಹೀಗಂತ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸದಿಂದ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರನ್ನುದ್ದೇಶಿಸಿ ಮಾತನಾಡಿದ ಅವರು, “ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತೃಪ್ತಿಯಾಗಿದೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುತ್ತಿದ್ದಾರೆ. ಈಗಿನ ವಾತಾವರಣ ನೋಡಿದರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಶಾಸಕರು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದರು. “ಬಿಜೆಪಿ ಸರ್ಕಾರದ ವೈಫಲ್ಯಗಳನ್ನೂ ಜನರಿಗೆ ತಲುಪಿಸಬೇಕು. ಪಕ್ಷದ ಜಿಲ್ಲಾ ಘಟಕಗಳಲ್ಲಿನ ಗೊಂದಲಗಳನ್ನು ನಿವಾರಿಸಲು ಈಗಾಗಲೇ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ’ ಎಂದು ಹೇಳಿದರು.
“ಪ್ರಧಾನಿ ಮೋದಿ ಅವರ ಬಾಯಿ ಬಡಾಯಿ, ಸಾಧನೆ ಶೂನ್ಯ. ಆದರೆ, ನಾವು ಸುಳ್ಳು ಹೇಳುವ ಅಗತ್ಯವಿಲ್ಲ. ಸರ್ಕಾರದ ಸಾಧನೆಗಳನ್ನು ತಿಳಿಸಿದರೆ ಸಾಕು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಗೆಲುವು ಸಾಧಿಸಲು ಪೂರಕ ವಾತಾವರಣ ಇದೆ. ಅದನ್ನು ಎಲ್ಲರೂ ಸೇರಿ ಪರಿಣಾಮಕಾರಿಯಾಗಿ ಬಳಿಸಿಕೊಳ್ಳೋಣ’ ಎಂದು ಸಿಎಂ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಶಾಸಕಾಂಗ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಮಾಜಿ
ಮುಖ್ಯಮಂತ್ರಿ ಧರ್ಮಸಿಂಗ್ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಂ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲ ಬೇಡ
ಮುಂದಿನ ಮುಖ್ಯಮಂತ್ರಿ ಯಾರು ಎಂದು ಗೊಂದಲ ಸೃಷ್ಠಿಸುವ ಪ್ರಯತ್ನ ಮಾಡದಂತೆ ವೆಣುಗೋಪಾಲ ಶಾಸಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ ನಡೆಸುವುದಾಗಿ ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಚುನಾವಣೆಯಲ್ಲಿ ಬಹುಮತ ಪಡೆದ ನಂತರ ಶಾಸಕಾಂಗ ಪಕ್ಷದ ನಾಯಕರು ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.