ಡೆಮಾಲಿಷನ್‌ಗೆ ತಡವೇಕೆ?: ಅಧಿಕಾರಿಗಳಿಗೆ ಸಚಿವ ಡಾ.ನಾರಾಯಣಗೌಡ ತರಾಟೆ
ಆರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು
Team Udayavani, Aug 25, 2022, 10:23 PM IST
ಬೆಂಗಳೂರು: ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಸುತ್ತಮುತ್ತ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ಡೆಮಾಲಿಷನ್‌ಗೆ ಬಿಬಿಎಂಪಿ ಆದೇಶವಿದ್ದರೂ, ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತರಾಟೆ ತೆಗೆದುಕೊಂಡರು.
ಇಂದು ವಿಕಾಸಸೌಧದಲ್ಲಿ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಆಡಳಿತ ಮಂಡಳಿ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ನಿಯಮ ಮೀರಿ ಕಟ್ಟಡ ನಿರ್ಮಿಸಿರುವವರ ವಿರುದ್ಧ ಕ್ರಮಕ್ಕೆ ಈ ಹಿಂದೆಯೇ ಸೂಚಿಸಲಾಗಿತ್ತು. ಬಿಬಿಎಂಪಿಯಿಂದ ಸರ್ವೆ ನಡೆಸಿ, ನಿಯಮ ಉಲ್ಲಂಘಿಸಿರುವ ಕಟ್ಟಡಗಳ ಡೆಮಾಲಿಷನ್‌ಗೆ ಬಿಬಿಎಂಪಿ ಆದೇಶಿಸಿದ್ದರೂ ಕ್ರಮಕ್ಕೆ ತಡವಾಗುತ್ತಿರುವುದೇಕೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿಬಿಎಂಪಿ ಆದೇಶದನ್ವಯ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇದರ ಜೊತೆಗೆ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ನೀಡುತ್ತಿರುವ ತರಬೇತಿ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ದಾಖಲಾತಿ ಹೆಚ್ಚಿಸಬೇಕು ಎಂದು ಡಾ.ನಾರಾಯಣಗೌಡ ಅವರು ಸೂಚಿಸಿದರು.
ಸರ್ಕಾರಿ ವೈಮಾನಿಕ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೂ ಪೈಲಟ್ ತರಬೇತಿ ಸಿಗಬೇಕು ಎಂಬುದು ನಮ್ಮ ಸರ್ಕಾರದ ಆಶಯ. ಈ ಬಗ್ಗೆ ಅಗತ್ಯ ಪ್ರಚಾರ ನೀಡುವ ಮೂಲಕ ದಾಖಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಸೂಚಿಸಿದರು. ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವರು ಸ್ಪಾನ್ಸರ್ ನೀಡಲು ಮುಂದೆ ಬಂದಿದ್ದಾರೆ ಎಂದು ಹೇಳಿದರು.
ಅಲ್ಲದೇ, ಹಲವು ಖಾಸಗಿ ಏರ್ ಲೈನ್ಸ್‌ಗಳು ಹಲವು ದಿನಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಾಕಿ ವಸೂಲಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ರಾತ್ರಿ ವೇಳೆ ವಿಮಾನ ಲ್ಯಾಂಡಿಂಗ್ ನೈಟ್ ಲ್ಯಾಂಡಿಂಗ್ ಲ್ಯಾಂಪ್ ಅಳವಡಿಸಲು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದ್ದು, ಆರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಿದರು.
ಗ್ರಾಮೀಣ ಕ್ರೀಡೋತ್ಸವ ಅದ್ದೂರಿಯಾಗಿ ಆಚರಿಸಲು ಸೂಚನೆ
ಇದೇ ವೇಳೆ ಗ್ರಾಮೀಣ ಕ್ರೀಡಾಕೂಟದ ಆಯೋಜನೆ ಬಗ್ಗೆ ಚರ್ಚಿಸಿದರು. ಗ್ರಾಮೀಣ ಕ್ರೀಡಾಕೂಟ ಮುಖ್ಯಮಂತ್ರಿಗಳ ಕನಸಾಗಿದ್ದು, ರಾಷ್ಟ್ರೀಯ ಕ್ರೀಡಾ ದಿನವಾದ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ. ಗ್ರಾಮೀಣ ಕ್ರೀಡಾಕೂಟ ಅದ್ದೂರಿಯಾಗಿ ಆಚರಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಿ ಎಂದು ಸೂಚಿಸಿದರು. ಅದೇ ದಿನ ಏಕಲವ್ಯ, ಕ್ರೀಡಾ ರತ್ನ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಗುತ್ತದೆ. ಅದಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ, ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆಯ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.